ಕೋಲಾರ: ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನದಲ್ಲಿದ್ದ ಕಾಟನ್ ಬಾಕ್ಸ್ಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕೋಲಾರದಲ್ಲಿ ಜರುಗಿದೆ.
ಜಿಲ್ಲೆಯ ಮಾಲೂರು ತಾಲೂಕಿನ ಆಲಂಬಾಡಿ ಗ್ರಾಮದ ಬಳಿ ಈ ಘಟನೆ ಜರುಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಜರುಗಿಲ್ಲ. ಮಾಲೂರಿನ ಆಲಂಬಾಡಿ ಬಳಿ ಕಾಟನ್ ಬಾಕ್ಸ್ಗಳನ್ನ ತುಂಬಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಚಲಿಸುತ್ತಿದ್ದ ಲಾರಿಗೆ ಬೆಂಕಿ ಆವರಿಸಿದೆ. ಇದನ್ನು ಗಮನಿಸಿದ ಸ್ಥಳೀಯರು, ಚಾಲಕನಿಗೆ ಕೂಗಿ ಹೇಳಿದ್ದಾರೆ.
ತಕ್ಷಣ ಚಾಲಕ ಲಾರಿಯನ್ನು ಗ್ರಾಮದ ಪಕ್ಕದಲ್ಲಿಯೇ ಇದ್ದ ಮೈದಾನವೊಂದರಲ್ಲಿ ನಿಲ್ಲಿಸಿದ್ದಾರೆ. ನಂತರ ಸ್ಥಳೀಯರ ಸಹಾಯದಿಂದ ಹೊತ್ತಿ ಉರಿಯುತ್ತಿದ್ದ ಕಾಟನ್ ಬಾಕ್ಸ್ಗಳನ್ನ ಲಾರಿಯಿಂದ ಕೆಳಗಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.