ETV Bharat / state

ಕೋಲಾರದಲ್ಲಿ ಹೊತ್ತಿ ಉರಿದ ಟೈರ್ ಅಂಗಡಿ - accidental fire

ನೂರಾರು ಜನ ಸೇರುವ ಕೋಲಾರ ನಗರದ ಹೊರವಲಯದಲ್ಲಿರುವ ಎಪಿಎಂಸಿ ಮಾರುಕಟ್ಟೆ ಬಳಿಯಿದ್ದ ಟೈರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Fire in tyre shop at kolar
ಟೈರ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ
author img

By

Published : Apr 2, 2021, 4:09 PM IST

ಕೋಲಾರ: ಟೈರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಸುಟ್ಟು ಭಸ್ಮವಾದ ಘಟನೆ ನಗರದ ಹೊರವಲಯದಲ್ಲಿರುವ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.

ಟೈರ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ

ಜಾಕೀರ್ ಎಂಬುವರ ಟೈರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿಯಲು ಆರಂಭಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಟೈರ್ ಅಂಗಡಿಯ ಹಿಂಭಾಗದಲ್ಲಿ ಬಾರ್ ಇತ್ತು. ಅಲ್ಲಿನ ಕಸದ ರಾಶಿಗೆ ಹಾಕಿದ್ದ ಬೆಂಕಿಯಿಂದ ಅಂಗಡಿಗೆ ಬೆಂಕಿ ಬಿದ್ದಿರಬಹುದು ಎನ್ನಲಾಗಿದೆ. ಅಂಗಡಿಯ ಮೇಲೆ 66 ಕೆವಿ ವಿದ್ಯುತ್ ಲೈನ್ ಹೋಗಿದ್ದು, ಪಕ್ಕದಲ್ಲಿದ್ದ ಮೂರ್ನಾಲ್ಕು ಅಂಗಡಿಗಳಿಗೆ ಬೆಂಕಿ ವ್ಯಾಪಿಸುವ ಆತಂಕವಿತ್ತು. ಕೊನೆಗೆ ಜೆಸಿಬಿ ಸಹಾಯದಿಂದ ಅಲ್ಲಿದ್ದ ಟೈರ್​ ಅಂಗಡಿಯನ್ನು ತೆರವುಗೊಳಿಸಿದ ನಂತರ ಬೆಂಕಿ ಹತೋಟಿಗೆ ಬಂದಿತು.

ಘಟನೆಯಿಂದ ಅಂಗಡಿಯಲ್ಲಿದ್ದ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ಟೈರ್​ಗಳು, ಯಂತ್ರೋಪಕರಣಗಳು ಸೇರಿದಂತೆ ಎರಡು ಬೈಕ್​ಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.