ETV Bharat / state

ಕೋಲಾರ: ಈದ್ ಮಿಲಾದ್ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ಐವರಿಗೆ ಗಾಯ - kolar Eid Milad parade news

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ ತೆರಳುತ್ತಿದ್ದ ವೇಳೆ ಒಂದು ಬಾಕ್ಸ್ ಪಟಾಕಿ ಸಿಡಿದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ಅವಘಡ
author img

By

Published : Nov 10, 2019, 6:35 PM IST

ಕೋಲಾರ: ಈದ್ ಮಿಲಾದ್ ಹಬ್ಬದ ಮೆರವಣಿಗೆ ತೆರಳುತ್ತಿದ್ದ ವೇಳೆ ಒಂದು ಬಾಕ್ಸ್ ಪಟಾಕಿ ಸಿಡಿದ ಪರಿಣಾಮ ಐದು ಮಂದಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಗರದಲ್ಲಿ ನಡೆದಿದೆ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ಅವಘಡ

ಈದ್ ಮಿಲಾದ್ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಮೆರವಣಿಗೆ ಹೋಗುವ ಸಂದರ್ಭದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಯುವಕನೋರ್ವ ಒಂದು ಪಟಾಕಿ ಸಿಡಿಸಿದ್ದ. ಆಗ ಮೆರವಣಿಗೆ ವಾಹನದಲ್ಲಿದ್ದ ಒಂದು ಬಾಕ್ಸ್ ಪಟಾಕಿ ಒಟ್ಟಿಗೆ ಸಿಡಿದ ಪರಿಣಾಮ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಮೆರವಣಿಗೆಯಲ್ಲಿದ್ದ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಉಳಿದ 20ಕ್ಕೂ ಹೆಚ್ಚು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಗಾಯಾಳುಗಳನ್ನ ಕೋಲಾರದ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Intro:ಕೋಲಾರ
ದಿನಾಂಕ - ೧೦-೧೧-೧೯
ಸ್ಲಗ್ - ಈದ್ ಮಿಲಾದ್ ಅವಘಡ
ಫಾರ್ಮಾಟ್ - ಎವಿ

ಆಂಕರ್ : ಕೋಲಾರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ ತೆರಳುತ್ತಿದ್ದ ವೇಳೆ ಪಟಾಕಿ ಬಾಂಬ್ ಸಿಡಿದು ಅವಘಡ ನಡೆದಿದೆ.

Body:ಈದ್ ಮಿಲಾದ್ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೆರವಣಿಗೆ ಆಯೋಜನೆ ಮಾಡಲಾಗಿತ್ತು ಅದರಂತೆ ಸಂಜೆ ೫ ಗಂಟೆ ಸುಮಾರಿಗೆ ಕೋಲಾರ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಯುವಕ ಒಂದು ಪಟಾಕಿ ಸಿಡಿಸುತ್ತಾನೆ, ಆಗ ಮೆರವಣಿಗೆ ವಾಹನದಲ್ಲಿದ್ದ ಒಂದು ಬಾಕ್ಸ್ ಪಟಾಕಿ ಸಿಡಿದು ಅವಘಡ ಸಂಭವಿಸಿದೆ. ಇದರಿಂದ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಉಳಿದ ೨೦ ಕ್ಕೂ ಹೆಚ್ಚು ಜನ ಮೆರವಣಿಗೆಯಲ್ಲಿದ್ದ ಯುವಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.

Conclusion:ಗಾಯಾಳುಗಳನ್ನ ಕೋಲಾರದ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಜಿಲ್ಲಾಸ್ಪತ್ರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.