ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಐವರು ಆರೋಪಿಗಳನ್ನು ಮಾಸ್ತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡಿ.17ರಂದು ಯಲವಳ್ಳಿಯ ವಸತಿ ಶಾಲೆಯ ಸಿಬ್ಬಂದಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ್ದರು. ಈ ಘಟನೆ ಬೆಳಕಿಗೆ ಬಂದ ಬಳಿಕ ಎಚ್ಚೆತ್ತ ಅಧಿಕಾರಿಗಳು ಎಲ್ಲ ಶಿಕ್ಷಕರು, ಸಿಬ್ಬಂದಿಯನ್ನು ವರ್ಗಾಯಿಸಿ, ಐವರ ವಿರುದ್ದ ಪ್ರಕರಣ ದಾಖಲಿಸಿದ್ದರು.
ಈ ಹಿಂದೆ ಪ್ರಾಂಶುಪಾಲೆ ಭಾರತಮ್ಮ, ಚಿತ್ರಕಲಾ ಶಿಕ್ಷಕ ಮುನಿಯಪ್ಪ, ಸಹ ಶಿಕ್ಷಕ ಅಭಿಷೇಕ್ ಎಂಬವರನ್ನು ಬಂಧಿಸಲಾಗಿತ್ತು. ಇಂದು ವಾರ್ಡನ್ ಮಂಜುನಾಥ್ ಹಾಗೂ ಡಿ ಗ್ರೂಪ್ ಸಿಬ್ಬಂದಿ ಕಲಾವತಿ ಎಂಬವರನ್ನು ಬಂಧಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಹಾಗೂ ಸಹಾಯಕ ಇರ್ದೇಶಕ ಶಿವಕುಮಾರ್ ನೀಡಿದ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.
ಪೋಕ್ಸೊ, ಜಾತಿ ನಿಂದನೆ ಹಾಗೂ ಶೌಚಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿ ಸ್ವಚ್ಚಗೊಳಿಸಿದ ಹಿನ್ನೆಲೆಯಲ್ಲಿ ಮೂರು ಕಾಯಿದೆಯಡಿ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ವಾರ್ಡನ್ ಮಂಜುನಾಥ್ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.
ಇದನ್ನೂಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಕೇಸ್, ಇಬ್ಬರ ಬಂಧನ; ಸ್ಥಳಕ್ಕೆ ಬಿಜೆಪಿ ಸಮಿತಿ ಭೇಟಿ