ಕೋಲಾರ: ಕೃಷಿ ಕಾಯ್ದೆ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರ ಸ್ವಾಗತಾರ್ಹ. ಇಂತಹ ದೊಡ್ಡ ಹೋರಾಟವನ್ನು ಕೇಂದ್ರ ಸರ್ಕಾರ ಕಡೆಗಣಿಸಿರುವುದು ಸರಿಯಲ್ಲ. ಈ ರೀತಿ ಯಾವುದೇ ಸರ್ಕಾರಗಳು ನಡೆದುಕೊಂಡಿರಲಿಲ್ಲ ಎಂದು ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹೇಳಿದರು.
ಕೊರೆಯುವ ಚಳಿಯಲ್ಲಿ ರೈತರು ಪ್ರತಿಭಟನೆ ಮಾಡಿದ್ರೂ ಪ್ರಧಾನಿ ನರೇಂದ್ರ ಮೋದಿ ಪ್ರತಿಭಟನಾ ಸ್ಥಳಕ್ಕೆ ಹೋಗಲಿಲ್ಲ. ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಕೆಲಸ ಸುಪ್ರೀಂ ಕೋರ್ಟ್ ಮಾಡಿದೆ ಎಂದರು.
ಇನ್ನು ಶಾಸಕಾಂಗ ಹಾಗೂ ಕಾರ್ಯಾಂಗ ಕೆಲಸ ಮಾಡಿಲ್ಲ ಎಂದು ನ್ಯಾಯಾಂಗ ಎಂಟ್ರಿ ಕೊಟ್ಟಿದೆ ಎಂದರು.