ETV Bharat / state

ಬೆಂಬಲಿಗರ ಸಭೆಯಲ್ಲಿ ಕಣ್ಣೀರಿಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್

ನಿನ್ನೆ ವರ್ತೂರು ಪ್ರಕಾಶ್‌ ಅವರ ಕೋಗಿಲಹಳ್ಳಿ ನಿವಾಸದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು, ಭರ್ಜರಿ ಬಾಡೂಟ ಮಾಡಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ವೇಳೆ ಕಾರ್ಯಕರ್ತರ ಸಭೆ ನಡೆಸಿ ತೀರ್ಮಾನಕ್ಕೆ ಬರುವುದಾಗಿ ಮಾಜಿ ಸಚಿವ ವರ್ತೂರು ಹೇಳಿದ್ದರು. ಅದರಂತೆ ಇದು ತಮ್ಮ ಬೆಂಬಲಿಗರ ಸಭೆ ನಡೆಸಿದಾಗ ಭಾವೋದ್ವೇಗಕ್ಕೊಳಗಾದರು..

Varthur Prakash
ವರ್ತೂರು ಪ್ರಕಾಶ್
author img

By

Published : Nov 28, 2021, 5:29 PM IST

Updated : Nov 28, 2021, 6:11 PM IST

ಕೋಲಾರ : ವಿಧಾನಪರಿಷತ್ ಚುನಾವಣೆ ಸಂಬಂಧ ಕರೆದಿದ್ದ ಬೆಂಬಲಿಗರ ಸಭೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಭಾವುಕರಾಗಿ ಕಣ್ಣೀರಿಟ್ಟ ಪ್ರಸಂಗ ನಡೆಯಿತು.

ಬೆಂಬಲಿಗರ ಸಭೆಯಲ್ಲಿ ಕಣ್ಣೀರಿಟ್ಟ ವರ್ತೂರು ಪ್ರಕಾಶ್

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಮುಖಂಡರು ಲೋಕಲ್​ ಆಪರೇಷನ್ ಕಮಲ ಮಾಡುವ ಮೂಲಕ ಕಮಲದ ಬೆಳೆ ಬೆಳೆಯಲು ಶುರು ಮಾಡಿದ್ದಾರೆ. ಅದರಂತೆ ಮಾಜಿ ಸಚಿವ ವರ್ತೂರು ಪ್ರಕಾಶ್‌ಗೆ ಗಾಳ ಹಾಕಿರುವ ಬಿಜೆಪಿ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆ ವರ್ತೂರು ಪ್ರಕಾಶ್‌ ಅವರ ಕೋಗಿಲಹಳ್ಳಿ ನಿವಾಸದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು, ಭರ್ಜರಿ ಬಾಡೂಟ ಮಾಡಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ವೇಳೆ ಕಾರ್ಯಕರ್ತರ ಸಭೆ ನಡೆಸಿ ತೀರ್ಮಾನಕ್ಕೆ ಬರುವುದಾಗಿ ಮಾಜಿ ಸಚಿವ ವರ್ತೂರು ಹೇಳಿದ್ದರು.

ಅದರಂತೆ ಇಂದು ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ವರ್ತೂರು ಪ್ರಕಾಶ್​​ ಮಾತನಾಡಿ, 'ಕಳೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಜನ‌ ಶ್ರಮಿಸಿದ್ದಾರೆ. ನನ್ನ ಬಳಿ ಅಧಿಕಾರ ಇಲ್ಲದ ವೇಳೆ‌ ಜನರು ನನ್ನ ಬೆಂಬಲಕ್ಕೆ ನಿಂತಿದ್ದರು' ಎಂಬುದನ್ನು ನೆನೆದು ಕಣ್ಣೀರು ಹಾಕಿದರು. ಈ ವೇಳೆ ಕಾರ್ಯಕರ್ತರು ಸಹ ಕಣ್ಣೀರಿಟ್ಟರು.

ಇದನ್ನೂ ಓದಿ: ಕಡಲೆಕಾಯಿ ಪರಿಷೆಗೆ ಮುಗಿಬಿದ್ದ ಜನ.. ಜಾತ್ರೆ ನಡೆಯುವ ಸ್ಥಳದಲ್ಲಿಯೇ ಕೋವಿಡ್​​ ಟೆಸ್ಟಿಂಗ್, ವ್ಯಾಕ್ಸಿನೇಷನ್

Last Updated : Nov 28, 2021, 6:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.