ಕೋಲಾರ : ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಆರೋಗ್ಯ ಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಪಿ ಮತ್ತು ಪ್ಲೇಟ್ ಲೇಟ್ಸ್ ಕಡಿಮೆಯಾಗುತ್ತಿದ್ದು, ಆರೋಗ್ಯ ಸ್ಥಿತಿ ತುಂಬಾ ಕ್ಷೀಣಿಸುತ್ತಿದೆ ಎಂದು ಜಾಲಪ್ಪ ಸಂಬಂಧಿ ಜಿ.ಹೆಚ್.ನಾಗರಾಜ್ ಎಂಬುವವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಳೆದ 40 ದಿನಗಳಿಂದ ಐಸಿಯುವಿನಲ್ಲಿ ಜಾಲಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. 97 ವಯಸ್ಸಿನ ಜಾಲಪ್ಪನವರು ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋಲಾರದ ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.