ಕೋಲಾರ : ರೈತ ಸಮಾವೇಶದಲ್ಲಿ ಭಾಗವಹಿಸಲು ಬಂದ ಕೃಷಿ ಸಚಿವ ಬಿ ಸಿ ಪಾಟೀಲ್ ಅವರಿಗೆ ರೈತ ಸಂಘದ ಮುಖಂಡರು ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಬಳಿ ರೈತ ಸಮಾವೇಶದಲ್ಲಿ ಭಾಗವಹಿಸಲು ಕೃಷಿ ಸಚಿವರು ಎತ್ತಿನ ಬಂಡಿಯಲ್ಲಿ ಆಗಮಿಸಿದ್ದರು. ಈ ವೇಳೆ ವಿವಾದಿತ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತ ಸಂಘದ ಮುಖಂಡರು ಕೃಷಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ರು. ಇದನ್ನ ಅರಿತ ನಂಗಲಿ ಪೊಲೀಸರು ರೈತ ಸಂಘದ ಮುಖಂಡರನ್ನ ಬಂಧಿಸಿ ಬಿಡುಗಡೆಗೊಳಿಸಿದ್ರು.