ETV Bharat / state

ಕೋಲಾರಕ್ಕೆ ಸಿದ್ದರಾಮಯ್ಯ ಆಗಮನ: ರಾಮಸಂದ್ರ ಗಡಿಯಲ್ಲಿ ಅದ್ಧೂರಿ ಸ್ವಾಗತ - ಮುಂದಿನ ವಿಧಾನಸಭಾ ಚುನಾವಣೆ

ಕೋಲಾರದಲ್ಲಿ ನಡೆಯಲಿರುವ ಕಾಂಗ್ರೆಸ್​ ಸಮಾವೇಶಕ್ಕೆ ಸಿದ್ದರಾಮಯ್ಯ ಆಗಮಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಕ್ಷೇತ್ರವನ್ನು ಇಲ್ಲೇ ಘೋಷಣೆ ಮಾಡುವ ಸಾಧ್ಯತೆಯಿದೆ.

Grand welcome to Siddaramayya in Kolara
ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ
author img

By

Published : Jan 9, 2023, 2:11 PM IST

Updated : Jan 9, 2023, 3:56 PM IST

ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ

ಕೋಲಾರ: ಕೋಲಾರದಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಭಾವಹಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ಅವರಿಗೆ ರಾಮಸಂದ್ರ ಗಡಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದೆ. ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕುವ ಮೂಲಕ ಮಾಲೂರು ಶಾಸಕ ನಂಜೇಗೌಡ ಅವರ ತಂಡ ಹಾಗೂ ಕಾರ್ಯಕರ್ತರು ಸ್ವಾಗತ ಕೋರಿದರು. ಸಿದ್ದರಾಮಯ್ಯ ನೇರವಾಗಿ ಕಾಂಗ್ರೆಸ್ ಕಚೇರಿಗೆ ತೆರಳಿದ್ದಾರೆ‌.

ಕೋಲಾರಕ್ಕೆ ಆಗಮನಕ್ಕೂ ಮುನ್ನ ಬೆಂಗಳೂರಿನ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಅದರಂತೆ ಸಿದ್ದರಾಮಯ್ಯ ಅವರೊಂದಿಗೆ ಮುನಿಯಪ್ಪ ಅವರು ಸಹ ಕಾರಿನಲ್ಲಿಯೇ ಬಂದಿದ್ದಾರೆ. ಈ ಮೂಲಕ ಕೋಲಾರ ಕಾಂಗ್ರೆಸ್​ನಲ್ಲಿರುವ ಭಿನ್ನಮತ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಜೊತೆಗೆ ಬಹುದಿನಗಳ ನಂತರ ರಮೇಶ್ ಕುಮಾರ್ ಹಾಗೂ ಕೆ.ಎಚ್.ಮುನಿಯಪ್ಪ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುನಿಯಪ್ಪ ಮುನಿಸಿಗೆ ಮದ್ದು!: ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವ ಕುರಿತು ಕೋಲಾರದ ಕಾಂಗ್ರೆಸ್​ ಕಚೇರಿಯಲ್ಲಿ ಎರಡು ಬಣಗಳ ನಡುವೆ ಒಂದು ತಿಂಗಳ ಹಿಂದೆ ಜಗಳ ನಡೆದಿತ್ತು. ಮಾಜಿ ಸಂಸದ ಕೆ ಎಚ್​ ಮುನಿಯಪ್ಪ ಅವರ ನೇತೃತ್ವದಲ್ಲಿ ಕಾಂಗ್ರೆಸ್​ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ಸಭೆಗೆ ರಮೇಶ್​ ಕುಮಾರ್​ ಬಣದ ಕಾರ್ಯಕರ್ತರು ತಡವಾಗಿ ಬಂದಿದ್ದರು. ತಡವಾಗಿ ಬಂದವರೇ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆಗೆ ನಿಲ್ಲಬೇಕು ಎಂದು ಒತ್ತಾಯಿದ್ದಾರೆ. ಆಗ ಕಾಂಗ್ರೆಸ್​ ಕಾರ್ಯಕರ್ತರು ಜೊತೆ ವಾಗ್ವಾದ ಏರ್ಪಟ್ಟಿತ್ತು. ವಾಗ್ವಾದ ಕೈ ಕೈ ಮಿಲಾಯಿಸುವವರೆಗೂ ಹೋಗಿತ್ತು. ಕೊನೆಯಲ್ಲಿ ಮುನಿಯಪ್ಪ ಅವರೇ ಕಾರ್ಯಕರ್ತರನ್ನು ಸಮಾಧಾನಗೊಳಿಸಿದ್ದರು.

ನಂತರದಲ್ಲಿ ಮಾಜಿ ಸಂಸದ ಕೆ ಎಚ್​ ಮುನಿಯಪ್ಪ ಅವರು ಸಭೆ ನಡೆಸಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಮ್ಮಲ್ಲೇ ಒಳಜಗಳ ನಡೆದರೆ ಚುನಾವಣೆ ಮೇಲೆ ಪರಿಣಾಮ ಬೀಳಲಿದೆ. ಇದರ ಲಾಭ ವಿರೋಧ ಪಕ್ಷಗಳಿಗೆ ಆಗುತ್ತದೆ ಎನ್ನುವ ಕಿವಿಮಾತನ್ನು ಹೇಳಿ ತಣ್ಣಗಾಗಿಸಿದ್ದರು. ಆದರೂ ಇದೀಗ ಸಿದ್ದರಾಮಯ್ಯ ಅವರೂ ಭಿನ್ನಮತ ಶಮನಕ್ಕೆ ಮುಂದಾಗಿದ್ದಾರೆ.

ಕೋಲಾರವೇ ಫೈನಲ್​ ಆಗುತ್ತಾ: ಅದರ ಜೊತೆಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಸಿದ್ದರಾಮಯ್ಯ ಅವರು ಕಳೆದ ಬಾರಿ ಬಾದಾಮಿಯಿಂದ ಸ್ಪರ್ಧಿಸಿ ಗೆದ್ದಿದ್ದು, ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ರಾಜಕೀಯ ವಲಯದಲ್ಲಿದೆ. ಈ ಬಾರಿಯೂ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಬಾದಾಮಿ ಜನ ಪಟ್ಟು ಹಿಡಿದಿದ್ದಾರೆ. ಅದಲ್ಲದೇ ರಾಜ್ಯದ ಹಲವು ಕ್ಷೇತ್ರಗಳ ಕಾಂಗ್ರೆಸ್​ ಶಾಸಕರು ತಮ್ಮ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತ್ರ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಇನ್ನೂ ಗುಟ್ಟು ಬಿಟ್ಟು ಕೊಟ್ಟಿಲ್ಲ.

ತಾವು ಯಾವು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದರ ಕುರಿತು ಇಂದಿನ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಅದಲ್ಲದೆ 2023ರ ವಿಧಾನಸಭಾ ಚುನಾವಣೆ ಸಿದ್ದರಾಮಯ್ಯ ಅವರು ಕಣಕ್ಕಿಳಿಯುತ್ತಿರುವ ಕೊನೆಯ ಚುನಾವಣೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಅವರಿಗೆ ಗೆಲ್ಲುವುದು ಅನಿವಾರ್ಯ. ಹಾಗಾಗಿ ಅವರು ಎಲ್ಲಿಂದ ಸ್ಪರ್ಧಿಸಬಹುದು ಎಂಬ ಕುತೂಹಲ ಸಿದ್ದರಾಮಯ್ಯ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳಿದೆ.

ಇನ್ನೊಂದೆಡೆ ಕೋಲಾರದಿಂದಲೇ ಸ್ಪರ್ಧಿಸುತ್ತಾರೆ ಎನ್ನುವ ಛಾಯೆಯೂ ದಟ್ಟವಾಗುತ್ತಿದೆ. ಈ ಮೊದಲು ಎರಡು ತಿಂಗಳ ಹಿಂದೆ ಕೋಲಾರ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು ಇದು ಎರಡನೇ ಬಾರಿ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶ ನೆಪದಲ್ಲಿ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡೆರಡು ಬಾರಿ ಕೋಲಾರಕ್ಕೆ ಭೇಟಿ ನೀಡಿ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಅವರ ನಡೆ ಕೋಲಾರದಿಂದ ಸ್ಪರ್ಧಿಸುತ್ತಾರೆ ಎನ್ನುವ ಮಾತುಗಳಿಗೆ ಪುಷ್ಟಿ ನೀಡುವಂತಿವೆ. ಆದರೂ ಇದೀಗ ಸಮಾವೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಕುತೂಹಲದಿಂದ ಕಆಯುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರಿಂದ ಇಂದು ಅಂತಿಮ ನಿರ್ಧಾರ? ಕೋಲಾರದ ಕೈ ಸಮಾವೇಶದತ್ತ ಎಲ್ಲರ ಕಣ್ಣು!

Last Updated : Jan 9, 2023, 3:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.