ಕೋಲಾರ: ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಶಾಲಾ ಆವರಣಕ್ಕೆ ಪ್ರವೇಶ ಮಾಡಿದಾಗಿನಿಂದ ಪರೀಕ್ಷೆ ಬರೆದು ಹೊರ ಹೋಗುವವರೆಗೂ ಹಂತ ಹಂತವಾಗಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಶಾಲಾ ಆವರಣ ಪ್ರವೇಶಿಸುತ್ತಿದ್ದಂತೆ, ಸಾಮಾಜಿ ಅಂತರದ ಬಾಕ್ಸ್ನಲ್ಲಿ ನಿಲ್ಲಬೇಕು. ನಂತರ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು. ಬಳಿಕ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಬಳಿಕ ಮಾತನಾಡಿದ ಸಂಸದ ಎಸ್. ಮುನಿಸ್ವಾಮಿ, ಜಿಲ್ಲೆಯಲ್ಲಿ 20,900 ವಿದ್ಯಾರ್ಥಿಗಳಿದ್ದು, 70 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಆತಂಕಕ್ಕೊಳಗಾಗದೇ ಪರೀಕ್ಷೆ ಬರೆಯಿರಿ ಎಂದು ಶುಭ ಹಾರೈಸಿದ್ರು.