ಕೋಲಾರ: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ, ಚಿಕೂನ್ ಗುನ್ಯಾದ ಕುರಿತು ಜನರು ನಿಗಾವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು ಕೋಲಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ, ಜಿಲ್ಲೆಯಲ್ಲಿ ಡೆಂಗ್ಯೂ, ಚಿಕೂನ್ ಗುನ್ಯಾ ಜ್ವರಗಳ ಬಗ್ಗೆ ಜನರು ನಿಗಾವಹಿಸಬೇಕು, ಜ್ವರ ಬಂದ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆಯಬೇಕು, ರೋಗ ಉಲ್ಬಣವಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಅಲ್ಲದೆ ಆರೋಗ್ಯ ಇಲಾಖೆಯಿಂದಲೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.