ಕೊಡಗು: ಜಿಲ್ಲೆಯಲ್ಲಿ ಜೋರು ಗಾಳಿ-ಮಳೆ ಆಗುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಮತ್ತೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
ಜುಲೈ 22 ರಿಂದ 24 ರವರೆಗೆ ಜಿಲ್ಲೆಯಲ್ಲಿ 204.4 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿ, ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಿದೆ.
ಒಂದು ವೇಳೆ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಸಹಾಯವಾಣಿ ಸಂಖ್ಯೆ 08272 - 221077 ಸಂಪರ್ಕಿಸಲು ಜಿಲ್ಲಾಡಳಿತ ಮನವಿ ಮಾಡಿದೆ.