ETV Bharat / state

ಕೋಲಾರದಲ್ಲಿ ಧಾರಾಕಾರ ಮಳೆ: ಜಿಲ್ಲಾಸ್ಪತ್ರೆಗೆ ನುಗ್ಗಿದ ನೀರು - Kolar

ಜಿಲ್ಲೆಯಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಜಿಲ್ಲಾಸ್ಪತ್ರೆ ಸೇರಿದಂತೆ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

Hospital is filled in water
ಜಿಲ್ಲಾಸ್ಪತ್ರೆಗೆ ನುಗ್ಗಿದ ನೀರು
author img

By

Published : Jun 7, 2021, 9:57 AM IST

ಕೋಲಾರ: ಕಳೆದ ರಾತ್ರಿ ಸುರಿದ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಕೋಲಾರ ಜಿಲ್ಲಾಸ್ಪತ್ರೆಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ.

ಜಿಲ್ಲಾಸ್ಪತ್ರೆ ಸೇರಿದಂತೆ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನುಗ್ಗಿದ ನೀರು

ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಕೋಲಾರ ಜಿಲ್ಲಾಸ್ಪತ್ರೆಯ ಲ್ಯಾಬ್ ಬಳಿ ಇದ್ದಂತಹ ಮಳೆ ನೀರಿನ ಪೈಪ್ ಬ್ಲಾಕ್ ಆಗಿದ್ದ ಪರಿಣಾಮ ಲ್ಯಾಬ್ ಹಾಗೂ ರಿಸೆಪ್ಷನ್ ವಿಭಾಗಕ್ಕೆ ನೀರು ನುಗ್ಗಿದೆ. ಇದರಿಂದಾಗಿ ಲ್ಯಾಬ್​​ಗೆ ಬರುವಂತಹ ರೋಗಿಗಳು ಪರದಾಡುವಂತಾಗಿತ್ತು.

ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೂ ಸಹ ನೀರು ನುಗ್ಗಿದೆ. ರಹಮತ್ ನಗರದ ತಗ್ಗು ಪ್ರದೇಶಗಳ ಹಲವಾರು ಮನೆಗಳಿಗೆ ಮಳೆ ನೀರಿನ ಜೊತೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಗೆ ನುಗ್ಗಿದ ನೀರನ್ನ ಹೊರಹಾಕಲು ಜನರು ಹರಸಾಹಸಪಡುತ್ತಿದ್ದು, ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.