ಕೋಲಾರ: ಕೌಟುಂಬಿಕ ಕಲಹದಿಂದಾಗಿ 150ಕ್ಕೂ ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸಿ, ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಗರದ ಕುರುಬರಪೇಟೆ ನಿವಾಸಿ ರುದ್ರಾಂಬಿಕೆ (30) ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ಮಾರತ್‌ಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕಳೆದ ರಾತ್ರಿ ರುದ್ರಾಂಬಿಕ ನಿದ್ರೆ ಮಾತ್ರೆಗಳನ್ನ ಸೇವಿಸಿದ್ದು, ಬೆಳಗ್ಗೆ ಕೋಲಾರ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ, ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಹೊರ ವಲಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.