ಕೋಲಾರ: ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿದೆ ಎಂದು ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳು ಸೇರಿದಂತೆ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದ ಬಳಿ ನಾಲ್ಕು ಟ್ಯಾಂಕರ್ ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯವನ್ನು ಆಂಧ್ರದ ವಿಜಯವಾಡದಿಂದ ಕರ್ನಾಟಕದ ಕೆಜಿಎಪ್ ಮಾರ್ಗವಾಗಿ ತಮಿಳುನಾಡಿನ ಕಡೆಗೆ ಸಾಗಿಸಲಾಗುತ್ತಿತ್ತು. ಆಂಧ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಮದ್ಯವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ: ಜೈಲಿನಿಂದಲೇ ಮಹಿಳೆಗೆ ಫೋನ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟ ರೌಡಿ ತೌಸೀಫ್..!
ಆರೋಪಿಗಳು ಸೇರಿದಂತೆ ನಾಲ್ಕು ಟ್ಯಾಂಕರ್ ಲಾರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಗಾರಪೇಟೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.