ETV Bharat / state

ಅಕ್ರಮವಾಗಿ ರಕ್ತ ಚಂದನ ಸಾಗಣೆ: ಕೋಲಾರದಲ್ಲಿ ಓರ್ವ ಅರೆಸ್ಟ್​, ಇಬ್ಬರು ಎಸ್ಕೇಪ್​ - red sandal,

ತಮಿಳುನಾಡಿನಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯ ಬಂಧನ
police arrested one accused
author img

By

Published : Aug 16, 2021, 4:45 PM IST

ಕೋಲಾರ: ಇನೋವಾ ಕಾರಿನಲ್ಲಿ ಅಕ್ರಮವಾಗಿ ರಕ್ತ ಚಂದನದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಬೇತಮಂಗಲ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಇನ್ನಿಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ಆರೋಪಿಯನ್ನು ಬಂಧಿಸಿದ ಪೊಲೀಸ್​

ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದ ಬಳಿ ತಮಿಳುನಾಡಿನಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ತುಂಡುಗಳನ್ನು ಮೂವರು ಕಾರಿನಲ್ಲಿ ಸಾಗಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬೇತಮಂಗಲ ಪೊಲೀಸರು, ಓರ್ವನನ್ನ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ.

Illegally transported Rakta Chandan
ಪೊಲೀಸರು ವಶಕ್ಕೆ ಪಡೆದಿರುವ ರಕ್ತ ಚಂದನದ ತುಂಡುಗಳು

ದಾಳಿ ವೇಳೆ ಕಾರಿನಲ್ಲಿದ್ದ 15 ರಕ್ತ ಚಂದನ ತುಂಡುಗಳು ಹಾಗೂ ಇನ್ನೊವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಮಂಗಳೂರು: ಅಕ್ರಮ ಸ್ಫೋಟಕ ಸಾಮಗ್ರಿ ದಾಸ್ತಾನು ಪತ್ತೆ: ಓರ್ವನ ಬಂಧನ ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.