ಕೋಲಾರ: ಏಳು ಬಾರಿ ಗೆದ್ದು ಸೋಲಿಲ್ಲದ ಸರದಾರನಾಗಿರುವ ಕೆ.ಹೆಚ್. ಮುನಿಯಪ್ಪ ಅಭಿವೃದ್ಧಿ ಕಾರ್ಯಗಳನ್ನ ಮೆಚ್ಚಿ, ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಪಕ್ಷೇತರ ಅಭ್ಯರ್ಥಿ ಗೋವಿಂದಪ್ಪ ಎಂಬುವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮುಳಬಾಗಿಲು ಹೊರವಲಯದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಮುನಿಯಪ್ಪ, ಪಕ್ಷದ ಶಾಲು ಹೊದಿಸುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುನಿಯಪ್ಪ, ಕಳೆದ 27 ವರ್ಷಗಳಲ್ಲಿ ಸಚಿವನಾಗಿ, ಸಂಸದನಾಗಿ ನಾನು ಮಾಡಿದ ಕೆಲಸಗಳು ಮತ್ತೆ ನನ್ನ ಗೆಲುವಿಗೆ ಶ್ರೀರಕ್ಷೆಯಾಗಿವೆ. ಹೆದ್ದಾರಿ ಸೇರಿದಂತೆ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು ಸಾವಿರಾರು ಯುವಕರಿಗೆ ಉದ್ಯೋಗ ಅವಕಾಶ ದೊರೆತಿದೆ. 8ನೇ ಬಾರಿಗೂ ಸಂಸತ್ ಪ್ರವೇಶ ಮಾಡಲು ಕ್ಷೇತ್ರದ ಜನ ಅನುವು ಮಾಡಿಕೊಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.