ಕೋಲಾರ: ಜೈನ ಸಮುದಾಯದ ವತಿಯಿಂದ ಪೌರ ಕಾರ್ಮಿಕರಿಗೆ ದಿನಸಿ ಪದಾರ್ಥಗಳನ್ನು ವಿತರಿಸಲಾಗಿದೆ.
ನಗರ ಸಭೆ ಕಚೇರಿ ಆವರಣದಲ್ಲಿ ಸೇರಿದ ಜೈನ ಸಮುದಾಯದ ಮುಖಂಡರು, ಇಡೀ ದೇಶವೇ ಲಾಕ್ಡೌನ್ ಆದ ಸಂದರ್ಭದಲ್ಲಿ ಪೌರ ಕಾರ್ಮಿಕರು ಶ್ರಮಿಸುವ ಮೂಲಕ ನಗರದಲ್ಲಿ ಸ್ವಚ್ಚತೆ ಕಾಪಾಡುತ್ತಿದ್ದಾರೆ. ಅಲ್ಲದೆ ಪ್ರತಿನಿತ್ಯ ನಗರವನ್ನು ಸ್ವಚ್ಚಗೊಳಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಪೌರ ಕಾರ್ಮಿಕರಿಗೆ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಸುಮಾರು 11 ದಿನಗಳಿಗಾಗುವಷ್ಟು ದಿನನಿತ್ಯದ ಆಹಾರ ಪದಾರ್ಥಗಳನ್ನು ಈ ವೇಳೆ ವಿತರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಶ್ರೀಕಾಂತ್ ಇದ್ದರು.