ETV Bharat / state

ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ - ಕೋಲಾರ ಕನ್ನಡ ರಾಜ್ಯೋತ್ಸವ ಸುದ್ದಿ

ಗಡಿಜಿಲ್ಲೆ ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಚಾಲನೆ ನೀಡಿದರು.

ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
author img

By

Published : Nov 1, 2019, 11:32 PM IST

ಕೋಲಾರ: ಜಿಲ್ಲೆಯಾದ್ಯಂತ 64ನೇ ಕನ್ನಡ ರಾಜ್ಯೋತ್ಸವವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಕೋಲಾರ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ರಾಷ್ಟ್ರಧ್ವಜ ಹಾಗೂ ಕನ್ನಡ ದ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ಕೋಲಾರ ಶಾಸಕ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಜೆ.ಮಂಜುನಾಥ್, ರಕ್ಷಣಾಧಿಕಾರಿ ಕಾರ್ತಿಕ್ ರೆಡ್ಡಿ ಭಾಗಿಯಾಗಿದ್ದರು.

ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಟಿಪ್ಪು ವಿಚಾರದಲ್ಲಿ ನಾನು ತಟಸ್ಥ: ನಾಗೇಶ್​

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ನಾನು ಪಕ್ಷೇತರನಾಗಿ ಗೆದ್ದಿರುವುದು ನಿಜ. ಹಿಂದೆ ಟಿಪ್ಪು ನಡೆಸಿರುವ ಹೋರಾಟದ ಬಗ್ಗೆ ಇತಿಹಾಸ ಹೇಳುತ್ತದೆ. ಟಿಪ್ಪು ಬಗ್ಗೆ ನಮಗೂ ಹೆಮ್ಮೆ, ಆತ ಓರ್ವ ಜಾತ್ಯಾತೀತ ಹೋರಾಟಗಾರನಾಗಿದ್ದ. ಈ ವಿಚಾರದಲ್ಲಿ ನಾನು ಸಚಿವನಾಗಿರುವುದರಿಂದ ತಟಸ್ಥನಾಗಿಯೇ ಇರುತ್ತೇನೆ ಎಂದು ಹೇಳಿದರು.

ಇನ್ನು ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನ ಗೆಲ್ಲಲಿದ್ದೇವೆ. ಆ ಮೂಲಕ ರಾಜ್ಯ ಬಿಜೆಪಿ ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ. ಅಲ್ಲದೆ ಜಿಲ್ಲೆಗೆ ಮೆಡಿಕಲ್ ಕಾಲೇಜು ಸೇರಿದಂತೆ ಸಾಕಷ್ಟು ಅಭಿವೃದ್ದಿ ಯೋಜನೆಗಳನ್ನ ಕೇಳಿದ್ದೇನೆ. ಇದರಿಂದ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದರು.

Intro:ಆಂಕರ್ : ಗಡಿನಾಡು ಕೋಲಾರ ಜಿಲ್ಲೆಯಾದ್ಯಂತ 64 ನೇ ಕನ್ನಡ ರಾಜ್ಯೋತ್ಸವವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. Body:ಕೋಲಾರ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರ ಧ್ವಜ ಹಾಗೂ ಕನ್ನಡ ದ್ವಜಾರೋಹಣ ನೆರವೇರಿಸಿದ ಬಳಿಕ ಸ್ತಬ್ದಚಿತ್ರಗಳ ಮೆರವಣಿಗೆಗೆ ಚಾವಲೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ನಾಗೇಶ್ ನಾನು ಪಕ್ಷೇತರನಾಗಿ ಗೆದ್ದಿರುವುದು ನಿಜ, ಇತಿಹಾಸ ತೆಗೆದುಕೊಂಡ್ರೆ ಹಿಂದೆ ಟಿಪ್ಪು ಬಹಳ ಹೋರಾಟ ಮಾಡಿದ್ದಾರೆ, ಅವರಿಂದ ನಮಗೂ ಹೆಮ್ಮೆ, ಆತ ಓರ್ವ ಜಾತ್ಯಾತೀತ ಹೋರಾಟಗಾರ, ಟಿಪ್ಪು ವಿಚಾರದಲ್ಲಿ ನಾನು ಸಚಿವನಾಗಿರುವುದರಿಂದ ತಟಸ್ಥನಾಗಿಯೇ ಇರುತ್ತೇನೆ ಎಂದು ಹೇಳಿದ್ರು. ಇನ್ನೂ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನ ಗೆಲ್ಲಲಿದ್ದೇವೆ ಆ ಮೂಲಕ ರಾಜ್ಯ ಬಿಜೆಪಿ ಸರ್ಕಾರ 5 ವರ್ಷ ಸುಬದ್ರವಾಗಿರಲಿದೆ. ಅಲ್ಲದೆ ಜಿಲ್ಲೆಗೆ ಮೆಡಿಕಲ್ ಕಾಲೇಜು ಸೇರಿದಂತೆ ಸಾಕಷ್ಟು ಅಭಿವೃದ್ದಿ ಯೋಜನೆಗಳನ್ನ ಕೇಳಿದ್ದೇನೆ ಇದರಿಂದ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದ್ರುConclusion:ಇನ್ನೂ ಇದೆ ವೇಳೆ ಕೋಲಾರ ಶಾಸಕ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಜೆ.ಮಂಜುನಾಥ್, ರಕ್ಷಣಾಧಿಕಾರಿ ಕಾರ್ತಿಕ್ ರೆಡ್ಡಿ ಭಾಗಿಯಾಗಿದ್ರು.

ಬೈಟ್ 1: ಎಚ್.ನಾಗೇಶ್ (ಅಬಕಾರಿ ಸಚಿವ)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.