ಕೋಲಾರ: ಪಕ್ಷ ವಿರೋಧಿ ಕೆಲಸ ಮಾಡಿರುವವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ, ನಿಮ್ಮ ಜೊತೆಯಲ್ಲಿ ಅಂತಹವರನ್ನು ಇರಿಸಿಕೊಳ್ಳಬೇಡಿ ಎಂದು ಕೆಪಿಸಿಸಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ ಹೊರತು, ನನಗೂ ಅವರಿಗೂ ಯಾವುದೇ ವೈಯಕ್ತಿಕ ದ್ವೇಷ ಇಲ್ಲ ಎಂದು, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೋಲಾರದಲ್ಲಿ ಹೇಳಿದರು.
ನಗರಸಭೆ ಚುನಾವಣೆ ಸಂಬಂಧ ಕೊಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನ ಜೊತೆಯಲ್ಲಿಟ್ಟುಕೊಂಡರೆ ನಿಮ್ಮ ಗೌರವ ಕಡಿಮೆಯಾಗುತ್ತೆ ಎಂದು ಸಲಹೆ ನೀಡಿದ್ದೇನೆ ಅಷ್ಟೆ. ನನಗೂ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ವೈಯಕ್ತಿಕ ಕೋಪವಿಲ್ಲ, ಮತ್ತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.
ಇನ್ನೂ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವಂತೆ ಮನವಿ ಮಾಡಿದ ಅವರು, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯ, ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸುವಂತೆ ಮನವಿ ಮಾಡಿದರು.