ETV Bharat / state

ಕೋಲಾರ- ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ ಲಿ.ನಲ್ಲಿ 36 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆ ಕುರಿತ ಮಾಹಿತಿ ಇಲ್ಲಿದೆ.

author img

By

Published : Mar 4, 2023, 2:25 PM IST

kolar-chikkaballapur-dcc-bank-recruitment-for-various-posts

ಕೋಲಾರ ಚಿಕ್ಕಬಳ್ಳಾಪುರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ ಲಿಮಿಟೆಡ್​ (ಕೆಸಿಡಿಸಿಸಿಬಿ)ಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕೌಂಟೆಂಟ್​, ಅಸಿಸ್ಟೆಂಟ್​ ಮ್ಯಾನೇಜರ್​, ಡ್ರೈವರ್​ ಸೇರಿದಂತೆ ಒಟ್ಟು 36 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್​ನಲ್ಲಿ 9 ಅಕೌಂಟೆಟ್ ಹುದ್ದೆ, 13+1 ಅಸಿಸ್ಟಂಟ್​ ಮ್ಯಾನೇಜರ್ ಹುದ್ದೆ, 3​ ಡ್ರೈವರ್ ಹುದ್ದೆ ಜೊತೆಗೆ 10 ಜವಾನ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಸಹಾಯಕರು​ ಮತ್ತು ಲೆಕ್ಕಿಗರು, ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ಉಳಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ, ಮತ್ತು ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷವಾಗಿದ್ದು, ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. ಒಬಿಸಿ , ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದವರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಆಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಹುದ್ದೆ ಅಧಿಸೂಚನೆ
ಹುದ್ದೆ ಅಧಿಸೂಚನೆ

ಅರ್ಜಿ ಸಲ್ಲಿಕೆ ವಿಧಾನ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ವಿಧಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ವಿಕಲಚೇತನರಿಗೆ 500 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಭರ್ತಿ ಮಾಡಬೇಕಿದೆ.

ಹುದ್ದೆ ಆಯ್ಕೆ: ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ವೇತನ: ಲೆಕ್ಕಿಗ ಹುದ್ದೆಗೆ 36,000 ರೂ, ಸಹಾಯಕ ನಿರ್ವಾಹಕ ಹುದ್ದೆಗೆ 33450,ಚಾಲಕ 27,650, ಜವಾನ ಹುದ್ದೆಗೆ 23,500 ರೂವರೆಗೆ ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ: ಈ ಹುದ್ದೆಗೆ ಮಾರ್ಚ್​ 2 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಮಾರ್ಚ್​ 16 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮಾರ್ಚ್​ 16 ಕಡೆಯ ದಿನವಾಗಿದೆ.

ಈ ಹುದ್ದೆ ಸಂಬಂಧ ಕೆಸಿಡಿಸಿಸಿಬಿ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರಗಳನ್ನು ಪರಿಶೀಲಿಸಲು virtualofficeerp.com ಗೆ ಭೇಟಿ ನೀಡಬೇಕು ಈ ವೇಳೆ K&C DCC Bank Recruitment 2023 ಎಂದು ಪರದೆಯ ಮೇಲೆ ಮೂಡುತ್ತದೆ. ಇಲ್ಲಿ ಕ್ಲಿಕ್​ ಮಾಡುವ ಮೂಲಕ ಸಂಪೂರ್ಣ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ಐಡಿಬಿಐ ನೇಮಕಾತಿ; 600 ಅಸಿಸ್ಟೆಂಟ್ ಮ್ಯಾನೇಜರ್​​​ ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.