ಕೋಲಾರ: ನಿವೃತ್ತ ಜಿಲ್ಲಾಧಿಕಾರಿ ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಕೊಲಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜಮೀರ್ ಪಾಷಾ ನಿಧನರಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಮೀರ್ ಪಾಷಾ ಸೋಲು ಕಂಡಿದ್ದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.