ETV Bharat / state

ಕೋಲಾರ ಜಿಲ್ಲಾ ಕೋವಿಡ್​ ಆಸ್ಪತ್ರೆಗೆ ಡಿಸಿ ಭೇಟಿ, ಪರಿಶೀಲನೆ - ಕೋವಿಡ್​ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಹಾಗೂ ಆಸ್ಪತ್ರೆಯಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯ ಪರಿಶೀಲಿಸಲು ಜಿಲ್ಲಾಧಿಕಾರಿ ಸತ್ಯಭಾಮ ಕೋವಿಡ್​ ಆಸ್ಪತ್ರೆಗೆ ಭೇಟಿ ನೀಡಿದ್ರು.

kolar
ಕೋಲಾರ
author img

By

Published : Oct 13, 2020, 11:21 AM IST

ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಹಾಗೂ ಕೋವಿಡ್ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹೆಚ್ಚು ಸುದ್ದಿಯಾದ ಕಾರಣ ಇಂದು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸಿ.ಸತ್ಯಾಭಾಮ ಭೇಟಿ ನೀಡಿದ್ರು.

ಕೋಲಾರ ಜಿಲ್ಲಾ ಕೋವಿಡ್​ ಆಸ್ಪತ್ರೆಗೆ ಡಿಸಿ ಭೇಟಿ
ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಕೋವಿಡ್ ವಾರ್ಡ್‌ಗಳಲ್ಲಿನ ವ್ಯವಸ್ಥೆ ಹಾಗೂ ಸೋಂಕಿತರ ವಿಚಾರಣೆ ಮಾಡಿದ್ರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಆಸ್ಪತ್ರೆ ಸಿಬ್ಬಂದಿ ಹಾಗೂ ಕೋವಿಡ್ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ರು. ಆಸ್ಪತ್ರೆಯಲ್ಲಿ ಶೌಚಾಲಯ ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳಿದ್ದು, ಶೀಘ್ರದಲ್ಲೇ ಅಧಿಕಾರಿಗಳ ಜೊತೆ ಮಾತನಾಡಿ ಎಲ್ಲವನ್ನೂ ಸರಿಪಡಿಸುವುದಾಗಿ ತಿಳಿಸಿದ್ರು.

ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 114 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ಅಂದ್ರೆನೇ ಒಂದು ರೀತಿ ಕೀಳಾಗಿ ನೋಡ್ತಾರೆ. ಆದ್ರೆ ನಮ್ಮ ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿರುವುದಾಗಿ ತಿಳಿಸಿದ್ರು. ಅಲ್ಲದೆ ಕೋವಿಡ್ ಆಸ್ಪತ್ರೆಯಲ್ಲಿ ಪ್ರತಿ ಶನಿವಾರ ಸ್ವಚ್ಛ ಶನಿವಾರ ಮಾಡುವುದಾಗಿ ತಿಳಿಸಿದ್ರು. ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ಹಾಗೂ ಡಿ ಗ್ರೂಪ್ ನೌಕರರನ್ನು ದೇವರುಗಳು ಎಂದು ಅಭಿನಂದಿಸಿ, ಅವರು ಮಾಡುವ ಕೆಲಸಕ್ಕೆ ಏನು ಕೊಟ್ಟರು ಸಾಲದು ಎಂದು ಖುಷಿ ಪಟ್ರು. ಜಿಲ್ಲಾಧಿಕಾರಿ ಸತ್ಯಭಾಮ ಅವರ ತಂದೆಗೂ ಸಹ ಇದೇ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ರಾಜ್ಯದಲ್ಲೇ ಅತ್ಯುತ್ತಮ ವೈದ್ಯರು ನಮ್ಮ ಕೋವಿಡ್ ಆಸ್ಪತ್ರೆಯಲ್ಲಿದ್ದಾರೆ. ಸಾರ್ವಜನಿಕರಿಗೆ ಯಾವುದೇ ಅನುಮಾನ, ಆತಂಕ ಬೇಡ ಎಂದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.