ಕೋಲಾರ: ಸಂಸದ ಎಸ್. ಮುನಿಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಖಡಕ್ ಎಚ್ಚರಿಕೆ ಕೊಟ್ಟರು.
ಸೋಮಾರಿತನ ಬಿಟ್ಟು ಜನರ ಕೆಲಸಗಳನ್ನು ಮಾಡಬೇಕು. ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳುವುದಾಗಿ ವಾರ್ನ್ ಮಾಡಿದ್ರು. ಅಧಿಕಾರಿಗಳ ಸೇವಾ ನಿಷ್ಠೆಯನ್ನು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಪರಿಶೀಲಿಸುವುದಾಗಿ ಅವರು ತಿಳಿಸಿದರು.
ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಉಪವಿಭಾಗಾಧಿಕಾರಿ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.