ಕೋಲಾರ : ಲೋಕಸಭಾ ಚುನಾವಣೆ ಹಿನ್ನಲೆ ಕೋಲಾರದ ಪಕ್ಷೇತರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ಹಾಲಿ ಸಂಸದ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಪಕ್ಷೇತರನಾಗಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದ್ದು, ಎಲ್ಲಾ ಅಹಿಂದ ವರ್ಗದ ಜನತೆ ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಕೆ.ಎಚ್.ಮುನಿಯಪ್ಪ ಪರ ತಮ್ಮ ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಕಾರ್ಯಕರ್ತರ ಅಭಿಪ್ರಾಯ ಪಡೆಯುವ ಸಲುವಾಗಿ ಸಭೆ ನಡೆಸಿ, ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಮಗೆ ಇಷ್ಟವಿಲ್ಲ. ಹೀಗಾಗಿ ಪಕ್ಷೇತರನಾಗಿದ್ದು, ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಈಗ ಹೇಳಿದ್ದಾರೆ.