ETV Bharat / state

ಕೋಲಾರದಲ್ಲಿ ಸರ್ಕಾರಿ ಆಸ್ಪತ್ರೆಗೆ ಕೊರೊನಾ ಸೋಂಕಿತರ ಸ್ಥಳಾಂತರಕ್ಕೆ ತೀರ್ಮಾನ: ಸಾರ್ವಜನಿಕರ ಆಕ್ಷೇಪ - kolar-jalappa-hospital-issues

ಕೋಲಾರ ಜಿಲ್ಲೆಯಲ್ಲಿನ ಕೊರೊನಾ ಸೋಂಕಿತರನ್ನು ಜಾಲಪ್ಪ ಆಸ್ಪತ್ರೆಯಿಂದ ಎಸ್​ಎನ್​ ಆರ್​ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲು ತೀರ್ಮಾನಿಸಿದ್ದು, ಇದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

kolar-jalappa-hospital-issues
ಸಾರ್ವಜನಿಕರಿಂದ ಆಕ್ಷೇಪ
author img

By

Published : May 17, 2020, 9:20 PM IST

ಕೋಲಾರ: ಜಿಲ್ಲೆಯಲ್ಲಿನ ಕೊರೊನಾ ಸೋಂಕಿತರನ್ನು ಜಾಲಪ್ಪ ಆಸ್ಪತ್ರೆಯಿಂದ ಎಸ್​ಎನ್​ಆರ್​ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ.

ಕೋಲಾರದಲ್ಲಿ ಕಳೆದ ಐದು ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9 ಕ್ಕೇರಿದೆ. ಜಾಲಪ್ಪ ಆಸ್ಪತ್ರೆಯಲ್ಲಿರುವ ಕೊರೊನಾ ಸೋಂಕಿತರನ್ನು ಕೋಲಾರ ನಗರದ ಹೃದಯ ಭಾಗದಲ್ಲಿರುವ ಎಸ್​ಎನ್​ಆರ್​ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಜನರ ವಿರೋಧ ವ್ಯಕ್ತವಾಗಿದೆ.

ಸಾರ್ವಜನಿಕರಿಂದ ಆಕ್ಷೇಪ
ಜಾಲಪ್ಪ ಆಸ್ಪತ್ರೆಯ ಕೋವಿಡ್ ವಾರ್ಡ್​ ನಲ್ಲಿ​ ಚಿಕಿತ್ಸೆ ನೀಡುತ್ತಿರುವ ಕಾರಣದಿಂದ ಜಾಲಪ್ಪ ಆಸ್ಪತ್ರೆಗೆ ಬರುವ ಹೊರ ರೋಗಿಗಳ ಸಂಖ್ಯೆ ತೀರಾ ಇಳಿಮುಖವಾಗಿದೆ. ಇದಕ್ಕಾಗಿ ಜಿಲ್ಲಾಡಳಿತದ ಮೇಲೆ ಸಾಕಷ್ಟು ಒತ್ತಡಗಳನ್ನು ತರಲಾಗಿದೆ ಎನ್ನಲಾಗಿದೆ. ಪರಿಣಾಮ ಸೋಂಕಿತರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಎಸ್ಎನ್​ಆರ್ ಜಿಲ್ಲಾಸ್ಪತ್ರೆಯಲ್ಲಿ ಬಡರೋಗಿಗಳು, ಗರ್ಭಿಣಿಯರು, ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಏನೇ ಕಾಯಿಲೆ ಬಂದರು ಬಡಜನರು ಇಲ್ಲಿಗೆ ಬರುತ್ತಾರೆ. ಹೀಗಾಗಿ ಈ ಆಸ್ಪತ್ರೆಗೆ ಸೋಂಕಿತರನ್ನು ಸ್ಥಳಾಂತರ ಮಾಡಿದರೆ ಕಷ್ಟವಾಗಲಿದೆ. ಅಷ್ಟೋ ಇಷ್ಟೋ ಸೌಲಭ್ಯಗಳಿರುವ ಈ ಸರ್ಕಾರಿ ಆಸ್ಪತ್ರೆಯಲ್ಲೂ ಕೊರೊನಾ ಆತಂಕ ಶುರುವಾದರೆ ಬಡ ರೋಗಿಗಳು ಎಲ್ಲಿಗೆ ಹೋಗಬೇಕು ಅನ್ನೋ ಪ್ರಶ್ನೆ ಎಲ್ಲರದ್ದು. ಕೂಡಲೇ ಜಿಲ್ಲಾಡಳಿತ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.