ಕೋಲಾರ: ಮಾಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಜನಜಾಗೃತಿ ಅರಿವು ಮೂಡಿಸುವ ಕಾರ್ಯಕ್ರಮವನ್ನ ಸಂಸದ ಎಸ್.ಮುನಿಸ್ವಾಮಿ ಉದ್ಘಾಟಿಸಿದರು.
ಓದಿ: ನಾಡಗೀತೆ ಅವಧಿ ಕಡಿತಗೊಳಿಸುವ ಪ್ರಸ್ತಾವ: ಕಸಾಪದಿಂದ ಸಚಿವರಿಗೆ ಪತ್ರ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರು ಯಾವುದೇ ಅಂತಕವಿಲ್ಲದೆ ಹಾಕಿಸಿಕೊಂಡು ಕೊರೊನಾ ಮುಕ್ತ ದೇಶವನ್ನಾಗಿಸಲು ಸಹಕಾರ ನೀಡಬೇಕಾಗಿದೆ ಎಂದು ಕರೆ ನೀಡಿದರು.
ಈಗಾಗಲೇ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಮುಕ್ತ ಮಾಡಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರದಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಜ್ಞಾನಿಗಳು ಈ ಲಸಿಕೆಯನ್ನು ಕಂಡು ಹಿಡಿದಿರುವುದು ನಮ್ಮ ಹೆಮ್ಮೆ. ಪ್ರತಿಯೊಬ್ಬ ನಾಗರಿಕರು ಆರೋಗ್ಯವಂತರಾಗಿ ಜೀವನ ನಡೆಸಲು ಕೋಟ್ಯಂತರ ಜನಕ್ಕೆ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಬೇಕೆಂದರು.
ಜಿಲ್ಲೆಯಲ್ಲಿ 76 ಲಸಿಕಾ ಕೇಂದ್ರಗಳಿದ್ದು, ಮಾಲೂರು ತಾಲೂಕಿನಲ್ಲಿ 10 ಲಸಿಕಾ ಕೇಂದ್ರಗಳಿವೆ. ಪ್ರತಿ ನಿತ್ಯ 100 ಮಂದಿಗೆ ಲಸಿಕೆ ಹಾಕಲಾಗುವುದು. ಸಕ್ಕರೆ ಕಾಯಿಲೆ. ಬಿಪಿ, ಹೃದಯ ಸಂಬಂಧಿತ ಕಾಯಿಲೆ, ಕ್ಯಾನ್ಸರ್ ಸೇರಿದಂತೆ 45 ವರ್ಷ ಮೇಲ್ಪಟ್ಟಂತವರು ಉಚಿತವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ, ಭಯ-ಆತಂಕ ಪಡುವ ಅಗತ್ಯವಿಲ್ಲ. ಪ್ರತಿಯೊಬ್ಬರು ಇದರ ಬಗ್ಗೆ ಅರಿವು, ಜಾಗೃತಿ ಮೂಡಿಸಿ ಕೊರೊನಾ ಮುಕ್ತ ದೇಶವನ್ನಾಗಿ ಮಾಡಲು ಕೈಜೋಡಿಸಬೇಕು ಎಂದು ಹೇಳಿದರು.