ಕೋಲಾರ : ತರಕಾರಿ ಬೆಳೆಯುವುದರಲ್ಲಿ ಹೆಸರುವಾಸಿಯಾಗಿರುವ ಜಿಲ್ಲೆಗೀಗ ತರಕಾರಿ ಕೊಳ್ಳುಲು ಬಂದವರಿಂದಲೇ ಕೊರೊನಾ ಕಂಟಕ ಎದುರಾಗಿದೆ.
ಕೋಲಾರದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ವಿಕೋಟದಲ್ಲಿ 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಹತ್ತು ಜನರ ಪೈಕಿ ಇಬ್ಬರು ಸೋಂಕಿತರು ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಗೆ ಮತ್ತು ಕೆಜಿಎಫ್ ತಾಲೂಕಿನ ಗಡಿ ಗ್ರಾಮಗಳಲ್ಲಿ ಓಡಾಡಿದ್ದಾರೆ. ಈ ಹಿನ್ನೆಲೆ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು 25 ಜನರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ, ಗಡಿಗೆ ಹೊಂದಿಕೊಂಡಿರುವ ಸುಮಾರು ಆರು ಗ್ರಾಮಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಗಡಿ ಗ್ರಾಮಗಳಲ್ಲಿ ಸೋಂಕು ನಿವಾರಕ ಸಿಂಪಡಿಸಲು ಪಂಚಾಯತ್‌ಗಳಿಗೆ ಸೂಚನೆ ನೀಡಲಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು.