ಕೋಲಾರ : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ನಡೆಸುತ್ತಿರುವ ಪೊಲೀಸರು, ಆದೇಶ ಗಾಳಿಗೆ ತೂರಿ ಸಂಚರಿಸುವ ಸವಾರರ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.
ಲಾಕ್‌ಡೌನ್ ಆದೇಶ ಉಲ್ಲಂಘಿಸಿ ರೋಡಿಗಳಿದ ಸುಮಾರು 30 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ವಾಹನ ಸವಾರರಿಗೆ ಕೊರೊನಾ ಪಾಠ ಮಾಡುತ್ತಿದ್ದಾರೆ. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಗಳು ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸರ್ಕಾರಗಳೊಂದಿಗೆ ಕೈ ಜೋಡಿಸಬೇಕು. ಸರ್ಕಾರದ ಆದೇಶಕ್ಕೆ ಬದ್ದರಾಗಿರಬೇಕೆಂದು ವಾಹನ ಸವಾರರಿಗೆ ಸೂಚನೆ ನೀಡಿದರು.
ಬೀದಿಗೆ ಬಂದು ಪ್ರಾಣ ಕಳೆದುಕೊಳ್ಳುವ ಬದಲಾಗಿ ಮನೆಯಲ್ಲಿಯೇ ಇದ್ದು ಪ್ರಾಣ ಉಳಿಸಿಕೊಳ್ಳಿ ಎಂದು ಸವಾರರಿಗೆ ಎಚ್ಚರಿಕೆ ಕೊಟ್ಟರು.