ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.
ರಾಜ್ಯ ಕಂದಾಯ ಇಲಾಖೆ ಮತ್ತು ಗ್ರಾಮ ಲೆಕ್ಕಾಧಿಕಾರಿ ನೌಕರರ ಸಂಘ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘದಿಂದ ಅಭಿನಂದನೆ ಮತ್ತು ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಕೇಂದ್ರ ನೌಕರರು ಹಾಗೂ ರಾಜ್ಯ ನೌಕರರು ಒಂದೇ ಆಗಿದ್ದರೂ ವೇತನ ಮಾತ್ರ ಬೇರೆ ಯಾಕೆ ಎಂದು ಪ್ರಶ್ನಿಸಿದರು. ಮುಂದಿನ ನೌಕರರ ಸಂಘದ ಶತಮಾನೋತ್ಸವದ ಅಂಗವಾಗಿ ಜೂನ್ ಒಳಗೆ ನೌಕರರ ಶತಮಾನೋತ್ಸವ ಭವನದ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ರು.
ಸಮಾರಂಭದಲ್ಲಿ ಗೌರವಾಧ್ಯಕ್ಷ ವಿ.ವಿ.ಶಿವರುದ್ರಯ್ಯ ಸೇರಿದಂತೆ ಪದಾಧಿಕಾರಿಗಳನ್ನ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಲೆಕ್ಕಿಗರ ಸಂಘದ ತಾಲೂಕು ಅಧ್ಯಕ್ಷ ಅಜಯ್ ಸೇರಿದಂತೆ ಮತ್ತಿತರರು ಹಾಜರಿದ್ದರು.