ಕೋಲಾರ: ನಿನ್ನೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆದಿದ್ದು, ಕುಡಿಯುವ ನೀರು, ಮೇವು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದ್ರು. ಅಲ್ಲದೇ ಬೇತಮಂಗಲದ ಪಾಲಾರ್ ಹಾಗೂ ಪೆನ್ನಾರ್ ನದಿಯ ಬಳಿ ನಿರ್ಮಾಣ ಮಾಡಲಾಗಿರುವ ಚೆಕ್ ಡ್ಯಾಂಗಳ ಅಂಕಿ ಅಂಶಗಳ ಕುರಿತು ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ಮಾಹಿತಿ ಪಡೆದ್ರು.
ಇದೇ ವೇಳೆ ಕೆಲ ಜಿಲ್ಲಾ ಪಂಚಾಯತ್ ಸದಸ್ಯರು ತಮ್ಮ ಕ್ಷೇತ್ರದ ಅಭಿವೃದ್ಧಿಗಳಿಗಾಗಿ ಹೆಚ್ಚಿನ ಅನುದಾನವನ್ನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ರು. ಸಭೆಯಲ್ಲಿ ಸಿಇಓ ದರ್ಶನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.