ಕೋಲಾರ: ಜಮ್ಮು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಕೆಜಿಎಫ್ ನಗರದ ಚಾಂಪಿಯನ್ ರೀಫ್ನಲ್ಲಿನ ಯೋಧನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಚಾಂಪಿಯನ್ ರೀಫ್ ನಿವಾಸಿ ದಿಲೀಪ್ (34) ಎಂಬುವರು ಆತ್ಮಹತ್ಯೆಗೆ ಶರಣಾದ ಯೋಧ. ಜಮ್ಮು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ, ದೆಹಲಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಳೆದ ಕೆಲವು ವರ್ಷಗಳ ಹಿಂದೆ ದಿಲೀಪ್ ಪತ್ನಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇವರಿಗೆ ಒಂದು ಮಗುವಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂದು ಸಂಜೆ ಅಥವಾ ನಾಳೆ ದಿಲೀಪ್ ಪಾರ್ಥಿವ ಶರೀರ ಕೆಜಿಎಫ್ ತಲುಪುವ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ವಕೀಲನ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ.. ಸ್ಯಾಂಡಲ್ವುಡ್ನ ‘ಭರ್ಜರಿ’ ಖಳನಟರು ಸೇರಿ 9 ಮಂದಿ ಬಂಧನ