ಕೋಲಾರ: ನಗರದ ತರಕಾರಿ ಮಾರುಕಟ್ಟೆ ಕೆಸರು ಗದ್ದೆಯಾಗಿರುವ ಪರಿಣಾಮ ವ್ಯಾಪಾರಿಗಳು ಮತ್ತು ರೈತರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಿದ್ದಾರೆ.
ಇದರಿಂದ ಬೇಸತ್ತಿರುವ ವ್ಯಾಪಾರಸ್ಥರು, ರೈತರು, ವರ್ತಕರು ಮಾರುಕಟ್ಟೆಯಲ್ಲಿ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸುವಂತೆ ಒತ್ತಾಯಿಸಿ ರಸ್ತೆಗೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿದರು. ಮಳೆ ಸಂದರ್ಭದಲ್ಲಿ ಮಾರುಕಟ್ಟೆ ಸಂಪೂರ್ಣ ಕೆಸರಾಗುತ್ತಿದ್ದು, ರೈತರು ಬೆಳೆದ ಬೆಳೆಗಳು ಮಾರುಕಟ್ಟೆಗೆ ಸಾಗಿಸಲಾಗದೆ ಸಮಸ್ಯೆ ಎದುರಾಗಿದೆ ಎಂದು ಅಳಲು ತೋಡಿಕೊಂಡರು.