ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ ಉರುಳಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಪಲ್ಲಿ ಗ್ರಾಮದ ಬಳಿ ನಡೆದಿದೆ.
ಶ್ರೀನಿವಾಸಪುರ ಘಟಕಕ್ಕೆ ಸೇರಿದ ಕೆಎ-07 ಎಫ್-1455 ಸಂಖ್ಯೆಯ ಸರ್ಕಾರಿ ಬಸ್ ಇದಾಗಿದೆ. ಅಪಘಾತದ ರಭಸಕ್ಕೆ ಬಸ್ನ ಮುಂದಿನ ಎರಡೂ ಚಕ್ರಗಳು ಬೇರ್ಪಟ್ಟಿವೆ. ಚಿಕ್ಕಬಳ್ಳಾಪುರದ ಚಿಂತಾಮಣಿಯಿಂದ ಶ್ರೀನಿವಾಸಪುರಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಓದಿ : ಕಾಲುವೆಗೆ ಉರುಳಿಬಿತ್ತು 54 ಪ್ರಯಾಣಿಕರಿದ್ದ ಬಸ್.. ಸಾವಿನ ಸಂಖ್ಯೆ 39ಕ್ಕೆ ಏರಿಕೆ - ಪರಿಹಾರ ಘೋಷಿಸಿದ ಪಿಎಂ
ಅಪಘಾತದಿಂದ ಬಸ್ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶ್ರೀನಿವಾಸಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.