ಕೋಲಾರ: ಕೊರೊನಾಪ್ರೇರಿತ ಲಾಕ್ಡೌನ್ನಿಂದಾಗಿ ಅಪಾರ ಸಂಖ್ಯೆಯ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೋಲಾರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು, ಕಾರ್ಮಿಕರನ್ನು ರಕ್ಷಣೆ ಮಾಡಬೇಕಿದ್ದ ರಾಜ್ಯ, ಕೇಂದ್ರ ಸರ್ಕಾರಗಳು, ಕಾರ್ಮಿಕರ ಕಾನೂನುಗಳನ್ನು ಕಾರ್ಪೋರೇಟ್ ಕಂಪನಿಗಳ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡುತ್ತಿದ್ದಾರೆಂದು ಆರೋಪಿಸಿದ್ರು.
ಎಲ್ಲಾ ಕೊರೊನಾ ವಾರಿಯರ್ಸ್ಗೆ ವಿಮಾ ಸೌಲಭ್ಯಗಳನ್ನು ವಿಸ್ತರಣೆ ಮಾಡಬೇಕು. ಜೊತೆಗೆ ಸಾರ್ವಜನಿಕ ಕ್ಷೇತ್ರದ ಕಾರ್ಖಾನೆಗಳ ಖಾಸಗೀಕರಣದ ನಡೆಯನ್ನು ಕೈ ಬಿಡಬೇಕೆಂದು ಆಗ್ರಹಿಸಿದ್ರು.