ಕೋಲಾರ : ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗಳಿಗೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಜಿಲ್ಲೆಯ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಲಾಕ್ಡೌನ್ ಜಾರಿಯ ವೇಳೆ ದುರುದ್ದೇಶದಿಂದ ಕಾರ್ಮಿಕರ ಕಾನೂನುಗಳನ್ನು ಸಡಿಲಿಕೆ ಮಾಡಲು ಮುಂದಾಗುತ್ತಿರುವುದು ಅಂರಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಕಾರ್ಮಿಕರು 10 ಗಂಟೆಗಳ ಕಾಲ ಕೆಲಸ ಮಾಡುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುವ ಸಾಧ್ಯತೆ ಇದೆ. ಸರ್ಕಾರ ಕಾರ್ಮಿಕ ನಿಯಮಗಳನ್ನು ಗಾಳಿಗೆ ತೂರಿ ಮಾಲೀಕರ ಪರವಾಗಿ ಕಾನೂನುಗಳನ್ನು ಸಡಿಲಗೊಳಿಸುವ ಹುನ್ನಾರ ನಡೆಸಿವೆ ಎಂದು ದೂರಿದರು.