ಕೋಲಾರ : ಕೇಂದ್ರದ ಮಾಜಿ ಸಚಿವರಾಗಿದ್ದ ಆರ್.ಎಲ್. ಜಾಲಪ್ಪ ಅವರ ನಿಧನದ ಬೆನ್ನಲ್ಲೇ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧಿಕಾರಕ್ಕಾಗಿನ ಕಲಹ ಬೀದಿಗೆ ಬಂದಿದೆ. ದೇವರಾಜ ಅರಸು ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸ್ಥಾನದ ವಿವಾದ ಸಂಬಂಧ ಸಂಸ್ಥೆಯಲ್ಲಿ ಈ ಕಲಹ ಶುರುವಾಗಿದೆ. ಅವರ ಮಕ್ಕಳು ಹಾಗೂ ನೂರಾರು ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಅಕ್ಕಮಹಾದೇವಿ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ಗೋವಿಂದ ಕಾರಜೋಳ
ಜಾಲಪ್ಪ ನಿಧನ ನಂತರ ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಜಾಲಪ್ಪ ಸಂಬಂಧಿ ಜಿ.ಹೆಚ್. ನಾಗರಾಜ್ ಆಯ್ಕೆ ಮಾಡಲಾಗಿದೆ. ಇದನ್ನು ವಿರೋಧಿಸಿ ಮಕ್ಕಳಾದ ನರಸಿಂಹಸ್ವಾಮಿ, ರಾಜೇಂದ್ರ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆ ವೇಳೆ ಆರ್.ಎಲ್. ಜಾಲಪ್ಪ ಕುಟುಂಬಸ್ಥರಿಗೆ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯಿಸಲಾಯಿತು.
ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಈ ವೇಳೆ ಪೊಲೀಸರನ್ನು ತಳ್ಳಿ ಪ್ರತಿಭಟನಾಕಾರರು ಕಾಲೇಜಿನೊಳಕ್ಕೆ ನುಗ್ಗಲು ಪ್ರಯತ್ನಿಸಿದರು. ಈ ಹಿನ್ನೆಲೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡ ಲಕ್ಷ್ಮಿಪತಿ ಎಂಬುವರ ತಲೆಗೆ ಪೆಟ್ಟಾಗಿದೆ. ಪಿಎಸ್ಐ ಅಣ್ಣಯ್ಯ ಅವರ ಕಾಲಿಗೆ ಗಾಯವಾಗಿದೆ. ಜಿ ಹೆಚ್ ನಾಗರಾಜ್ ಅವರ ಆಯ್ಕೆ ಮಾಡಿದ್ದಕ್ಕೆ ಜಾಲತಾಣದಲ್ಲೂ ಸಹ ಆಕ್ರೋಶ ವ್ಯಕ್ತವಾಗಿದೆ.
ಕುಟುಂಬದವರಿಗೆ ಟ್ರಸ್ಟ್ ಹಾಗೂ ಸಂಸ್ಥೆಯಲ್ಲಿ ಸೂಕ್ತ ಸ್ಥಾನಮಾನ ನೀಡದೆ ಸರ್ವಾಧಿಕಾರಿ ಧೋರಣೆ ತೋರಲಾಗಿದೆ ಎಂದು ಅಧ್ಯಕ್ಷ ಪಟ್ಟ ನೀಡುವಂತೆ ಪಟ್ಟು ಹಿಡಿದಿರುವ ಜಾಲಪ್ಪ ಅವರ ಹಿರಿಯ ಮಗ ಮಾಜಿ ಶಾಸಕ ನರಸಿಂಹಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.