ಕೋಲಾರ : ಇಲ್ಲಿನ ವಿಧಾನ ಸಭಾ ಕ್ಷೇತ್ರದಲ್ಲಿ ದಿನೇ ದಿನೆ ಸಿದ್ದರಾಮಯ್ಯ ವಿಚಾರವಾಗಿ ಚುನಾವಣಾ ತಯಾರಿ ರಂಗೇರುತ್ತಿದೆ. ಇತ್ತೀಚಿಗೆ ರಮೇಶ್ ಕುಮಾರ್ ಅವರನ್ನೊಳಗೊಂಡ ತಂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೋಲಾರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಬಳಿಕ ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರನ್ನೊಳಗೊಂಡ ತಂಡವೊಂದು ಸಿದ್ದರಾಮಯ್ಯ ಭೇಟಿ ಮಾಡಿ ಮತ್ತದೇ ಬೇಡಿಕೆ ಇಟ್ಟಿದ್ದರು. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕೋಲಾರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಸರಣಿಯಾಗಿ ಕೋಲಾರದಿಂದ ವಿವಿಧ ಸಮುದಾಯದ ಮುಖಂಡರು, ಕಾರ್ಯಕರ್ತರು ತೆರಳಿ ಕೋಲಾರಕ್ಕೆ ಬರುವಂತೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಕೋಲಾರಕ್ಕೆ ಬರುವಂತೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದ ಶಾಸಕರು ಒತ್ತಾಯ ಮಾಡಿದ್ದರು. ಇದೀಗ ಕಾರ್ಯಕರ್ತರು ಹಾಗೂ ಸಮುದಾಯ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಓದಿ : ರಷ್ಯಾ- ಉಕ್ರೇನ್ ಯುದ್ದದಿಂದ ಪಠ್ಯ ಪುಸ್ತಕದ ಹಂಚಿಕೆಯಲ್ಲಿ ಸಮಸ್ಯೆಯಾಗಿದೆ: ಶಿಕ್ಷಣ ಸಚಿವ ನಾಗೇಶ್