ETV Bharat / state

ಕೋಲಾರ ಜಿಲ್ಲಾ ಪಂಚಾಯತ್​ನಲ್ಲಿದೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ; ಇಲ್ಲಿದೆ ವಿವರ - ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Library supervisor job notification form kolar zilla panchayat

author img

By ETV Bharat Karnataka Team

Published : Nov 13, 2023, 2:48 PM IST

ಕೋಲಾರ ಜಿಲ್ಲಾ ಪಂಚಾಯತ್​ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಐದು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ..

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಕೋಲಾರ ಜಿಲ್ಲಾ ಪಂಚಾಯತ್​ ವ್ಯಾಪ್ತಿಯ ತಾಲೂಕುಗಳಲ್ಲಿ ಖಾಲಿ ಇರುವ ಒಟ್ಟು 5 ಹುದ್ದೆಗಳ ಸಂಖ್ಯೆ ಮತ್ತು ವಿವರ ಈ ರೀತಿಯಾಗಿದೆ.

ಮಾಲೂರು 2, ಮುಳಬಾಗಿಲು 2, ಕೋಲಾರ 1

ವಿದ್ಯಾರ್ಹತೆ: ಅಭ್ಯರ್ಥಿಯು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್ ಉತ್ತೀರ್ಣ ಆಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆಯ ಬಳಿಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.

ವಿಶೇಷ ಸೂಚನೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಅಧಿಕೃತ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ನಿಗದಿತ ಅರ್ಜಿಯಲ್ಲಿ ಸ್ವ ವಿವರ ಭರ್ತಿ ಮಾಡಿ ಅದರ ಜೊತೆಗೆ ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಮೀಸಲಾತಿ, ಸ್ಥಳೀಯ ನಿವಾಸಿ ಸೇರಿದಂತೆ ಅಗತ್ಯ ದಾಖಲಾತಿ ಅರ್ಜಿಗಳನ್ನು ಆಯಾ ಗ್ರಾಮ ಪಂಚಾಯಿತಿ ಅಥವಾ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಕಚೇರಿಗೆ ನಿಗದಿತ ದಿನಾಂಕಕ್ಕೆ ಮುನ್ನವೇ ಸಲ್ಲಿಕೆ ಮಾಡಬೇಕು.

ಈ ಹುದ್ದೆಗೆ ಅಭ್ಯರ್ಥಿಗಳು ಅಕ್ಟೋಬರ್​ 20 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ನವೆಂಬರ್​ 19 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಹಾಗೂ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು zpkolar.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ನಿಮ್ಹಾನ್ಸ್​​ನಲ್ಲಿ ನೇಮಕಾತಿ: 32 ನರ್ಸಿಂಗ್​ ಹುದ್ದೆಗಳಿಗೆ ವಾಕ್​ ಇನ್​ ಇಂಟರ್ವ್ಯೂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.