ಕೋಲಾರ: ಕೆಜಿಎಫ್ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ವಿಚಾರವಾಗಿ ಮಾಜಿ ಶಾಸಕರುಗಳಿಬ್ಬರು ಜಟಾಪಟಿಗೆ ಬಿದ್ದಿದ್ದಾರೆ. ಹೀಗಾಗಿ ಮಾಜಿ ಶಾಸಕರೊಬ್ಬರಿಗೆ ಇನ್ನೊಬ್ಬ ಮಾಜಿ ಶಾಸಕರ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಕೆಜಿಎಫ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೈ.ಸಂಪಂಗಿ ಅವರು, ಅದೇ ಕ್ಷೇತ್ರದ ಮಾಜಿ ಶಾಸಕ ಎಸ್.ರಾಜೇಂದ್ರನ್ ಅವರ ಬೆಂಬಲಿಗರಿಂದ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ರಾಜೇಂದ್ರನ್ ಬೆಂಬಲಿತ 8 ಜನರ ವಿರುದ್ಧ ಕೆಜಿಎಫ್ ಎಸ್ಪಿ ಧರಣಿದೇವಿ ಅವರನ್ನು ಭೇಟಿ ದಾಖಲೆ ಸಹಿತ ದೂರು ನೀಡಿದ್ದಾರೆ.
ಇತ್ತೀಚೆಗೆ ಕೆಜಿಎಫ್ ನಗರದ ಅಂಬೇಡ್ಕರ್ ಭವನವನ್ನ ತೆರವುಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಈ ವಿಚಾರವಾಗಿ ಉಭಯ ನಾಯಕರು ಪರ - ವಿರೋಧ ಹೇಳಿಕೆಗಳನ್ನು ನೀಡಿದ್ದರು. ಬಿಜೆಪಿ ಸಂಘಟನೆ, ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿ ಹಾಗೂ ಗೋಹತ್ಯೆ ನಿಷೇಧ ಪ್ರಚಾರ ಮಾಡಿದ್ದಕ್ಕೆ ಪ್ರಾಣ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ನನಗೆ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳವಂತೆ ಮಾಜಿ ಶಾಸಕ ಸಂಪಂಗಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಳ್ಳಾಲದಲ್ಲಿ ಮಲತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!