ಕೋಲಾರ : ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು ಕೋಲಾರದಲ್ಲಿ ಒಟ್ಟು 16,28,782 ಜನ ಮತದಾರರ ಪೈಕಿ 12,55,976 ಜನ ಮತದಾನ ಮಾಡಿದ್ದು ಶೇ 77.15 ರಷ್ಟು ಮತದಾನವಾಗಿದೆ.
ಕಳೆದ ಭಾರಿಯ ಶೇಕಡಾವಾರು ಮತದಾನಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮೂರು ರಷ್ಟು ಹೆಚ್ಚಾಗಿದೆ. ಅದಕ್ಕಾಗಿ ಜಿಲ್ಲಾಡಳಿತ ಸಂತಸ ವ್ಯಕ್ತಪಡಿಸಿದೆ. ಅಲ್ಲದೆ ಕ್ಷೇತ್ರದಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತ ಮತದಾನ ನಡೆಸಿರುವ ಬಗ್ಗೆ ಜಿಲ್ಲಾಡಳಿತ ನಿಟ್ಟುಸಿರು ಬಿಟ್ಟಿದೆ.
ಜೊತೆಗೆ ಎಂಟು ವಿಧಾನಸಭಾ ಕ್ಷೇತ್ರಗಳ ಮತದಾನವಾದ ಮತಪೆಟ್ಟಿಗೆಗಳನ್ನು ಇವಿಎಂ ಮಷಿನ್ಗಳನ್ನು ಕೋಲಾರ ನಗರದ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಡಲಾಗಿದ್ದು, ನಾಲ್ಕು ಹಂತಗಳ ಭದ್ರತೆ ನೀಡಲಾಗಿದೆ. ಅಭ್ಯರ್ಥಿಗಳ ಸಮ್ಮುಖದಲ್ಲಿ ಸೀಲ್ ಮಾಡಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ.