ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಆರ್ಟಿಒ ಚೆಕ್ಪೋಸ್ಟ್ ಮೇಲೆ ಗಡಿ ಭಾಗದಲ್ಲಿ ವಾಹನಗಳಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ದಾಳಿ ನಡೆಸಲಾಗಿದೆ.
ಆಂಧ್ರ, ಚೆನ್ನೈಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಬಾರ್ಡರ್ ಬಳಿ ಇರುವ ನಂಗಲಿ ಚೆಕ್ ಪೋಸ್ಟ್ನಲ್ಲಿ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಹಲವಾರು ಸಂಘಟನೆಯವರು ಆರೋಪಿಸಿದ್ದರು. ಅದರಂತೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಅಧಿಕಾರಿ ಬಲೆಗೆ