ಕೋಲಾರ: ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಹರಿಯಾಣ ಮೂಲದ ಪ್ರದೀಪ್ ಶರ್ಮ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.
ಟಮಕದಲ್ಲಿರುವ ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರದೀಪ್ ಶರ್ಮ ತಾವು ಉಳಿದುಕೊಂಡಿದ್ದ ಪಿಜಿ ಬಳಿ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಗಲ್ ಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ದಾವಣಗೆರೆ: ಬೋರ್ವೆಲ್ ರಿಪೇರಿ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ಸಾವು, ಮತ್ತೊಬ್ಬ ಗಂಭೀರ