ETV Bharat / state

ಅರುಣ್ ಸಿಂಗ್ ಕ್ಲಿಯರ್ ಆಗಿ ಹೇಳಿದ್ದಾರೆ... ನಾಯಕತ್ವ ಬದಲಾವಣೆ ಇಲ್ಲ: ಶೆಟ್ಟರ್, ಪಾಟೀಲ್​ ಸ್ಪಷ್ಟನೆ - arun singh news

ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಜಗದೀಶ್​ ಶೆಟ್ಟರ್​ ಮತ್ತು ಸಚಿವ ಬಿ ಸಿ ಪಾಟೀಲ್​ ಹೇಳಿದ್ದಾರೆ.

patil
ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ
author img

By

Published : Jun 12, 2021, 4:49 PM IST

ಹುಬ್ಬಳ್ಳಿ/ಕೋಲಾರ: ಅರುಣ್​ ಸಿಂಗ್ ಅವರು ಕ್ಲಿಯರ್ ಆಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಯಡಿಯೂರಪ್ಪ ಅವರು ಕೂಡ ಇನ್ನೂ ಎರಡು ವರ್ಷ ಸಿಎಂ ಆಗಿಯೇ ಇರ್ತೀನಿ ಅಂತ ಹೇಳಿದ್ದಾರೆ. ಇಲ್ಲಿ ಯಾವುದೇ ರೀತಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಿನ್ನೆಯಷ್ಟೇ ನಮ್ಮ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ, ಈಗ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಆದರೆ, ಕೆಲವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದಾರೆ. ಅವರು ಯಾಕೆ ಹೋಗಿದ್ದಾರೆ ಅದನ್ನು ಅವರೇ ಹೇಳಬೇಕು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಪುನರ್ ರಚನೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ:

ಕಾಂಗ್ರೆಸ್ ಆಡಳಿತಕ್ಕೆ ಬಂದರೇ ಕಾಶ್ಮೀರದಲ್ಲಿ 370ನೇ ವಿಧಿ ಪುನರ್ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಹಳಷ್ಟು ಜನರು ಹೊರ ಹೋಗುತ್ತಿದ್ದಾರೆ. ಆದರೂ ಕೂಡ ಕಾಂಗ್ರೆಸ್​​​​ ಅವರಿಗೆ ಬುದ್ಧಿ ಬಂದಿಲ್ಲ. ಇಷ್ಟು ವರ್ಷ ಕಾಶ್ಮೀರದಲ್ಲಿ 370 ಯಿಂದ ಉಗ್ರಗಾಮಿಗಳು ದಾಳಿ‌ ಮಾಡುವಂತೆ ಮಾಡಿ ಎಲ್ಲವನ್ನೂ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕೋಲಾರದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ:

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ಎರಡು ವರ್ಷವೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳು ಎಂದು ಕೋಲಾರದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ರು. ಈಗಾಗಲೇ ನಾಯಕತ್ವದ ಕುರಿತು ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಅದರಂತೆ ಅರುಣ್ ಸಿಂಗ್, ನಳೀನ್ ಕುಮಾರ್ ಕಟೀಲ್ ಅವರು ಸಹ ಸ್ಪಷ್ಟಪಡಿಸಿದ್ದಾರೆ. ಇದಲ್ಲದೇ ನಿನ್ನೆ ಹಾಸನದಲ್ಲಿ ಯಡಿಯೂರಪ್ಪ ಅವರೇ ಈ ಕುರಿತು ತಿಳಿಸಿದ್ದಾರೆ ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಕಾಂಗ್ರೆಸ್​ನ ಕೃಷ್ಣಬೈರೇಗೌಡರು ಎಕ್ಸ್​​ಪರ್ಟ್​​:

ಇನ್ನು ಬಿಜೆಪಿ ಸರ್ಕಾರ 20 ಪರ್ಸಂಟ್ ಸರ್ಕಾರ ಎಂದ ಕಾಂಗ್ರೆಸ್​ನ ಕೃಷ್ಣಬೈರೇಗೌಡರಿಗೆ ತಿರುಗೇಟು ನೀಡಿದ ಅವರು, ಇಂತಹ ವ್ಯವಹಾರದಲ್ಲಿ ಕೃಷ್ಣಬೇರೇಗೌಡರು ಎಕ್ಸ್​​ಪರ್ಟ್ ಆಗಿದ್ದು, ಈ ರೀತಿಯ ವ್ಯವಹಾರಗಳು ನನಗೆ ಗೊತ್ತಿಲ್ಲ. ಇವತ್ತೇ ಈ ರೀತಿ ಕೇಳುತ್ತಿರುವುದು ಎಂದರು.

ಇನ್ನು ಪೆಟ್ರೋಲ್ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವರು, ಒಂದು ಬ್ಯಾರಲ್ ತೈಲ ಉತ್ಪನ್ನ 70 ಡಾಲರ್ ಆಗಿದೆ‌, ಕಾಂಗ್ರೆಸ್​ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ತಿಳಿಸಿದ್ರು. ಅಲ್ಲದೇ ಕಾಂಗ್ರೇಸ್ ಸರ್ಕಾರ ಇರುವ ರಾಜ್ಯಗಳಲ್ಲೂ ತೈಲ ಬೆಲೆ ಕಡಿಮೆ ಇದ್ಯಾ ಎಂದು ಪ್ರಶ್ನಿಸಿದ ಅವರು, ಇದು ಇಡೀ ಜಗತ್ತಿನ ಸಮಸ್ಯೆ, ಕಚ್ಚಾ ತೈಲ ಬೆಲೆ ಏರಿಕೆಯಾದಾಗ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಹಜ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.