ಕೋಲಾರ : ಸಿಎಂ ಪುತ್ರ ವಿಜಯೇಂದ್ರ ಅವರು ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಕೋಲಾರದಲ್ಲಿ ಸಚಿವ ಆರ್ ಶಂಕರ್, ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ.
ಇಂದು ಕೋಲಾರಕ್ಕೆ ಭೇಟಿ ನೀಡಿದ್ದ ಸಚಿವರು, ಕೋಲಾರ ಹೊರ ವಲಯದ ತೋಟಗಾರಿಕೆ ವಿಶ್ವ ವಿದ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ವೇಳೆ ಶಾಸಕ ಯತ್ನಾಳ್ ಹೇಳಿಕೆ ನೀಡಿರುವ ರೀತಿ ಸಿಎಂ ಪುತ್ರ ವಿಜಯೇಂದ್ರ ಎಲ್ಲೆಯೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯತ್ನಾಳ್ ಹೇಳಿಕೆಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ಡ್ಯಾಮೇಜ್ ಇಲ್ಲ ಎಂದರು. ನಾನು ಸಂಪುಟದಲ್ಲಿ ಇದ್ದೇನೆ, ವಿಜಯೇಂದ್ರ ಹಸ್ತಕ್ಷೇಪ ಮಾಡಿಲ್ಲ ಎಂದರು.
ಕೊರೊನಾ ಲಾಕ್ಡೌನ್ ಕುರಿತು ಮಾತನಾಡಿದ ಅವರು, ಕೊರೊನಾ ಪರಿಣಾಮ ಈಗಾಗಲೇ ಕುಗ್ಗಿದೆ. 2ನೇ ಹಂತದ ಲಾಕ್ಡೌನ್ ಅವಶ್ಯಕತೆ ಇಲ್ಲ. ಕೊರೊನಾ ಲಸಿಕೆ ಬಂದಿದೆ, ಆದರೂ ಜನರು ಎಚ್ಚರಿಕೆಯಿಂದ ಇರಬೇಕು ಎಂದರು.
ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ, ನಾನು ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ ಎಂದು ನಕ್ಕು ಸುಮ್ಮನಾದರು.
ಇದನ್ನೂ ಓದಿ: ಪವಿತ್ರ ರಾಮ ಮಂದಿರ ನಿರ್ಮಾಣಕ್ಕೆ ಪಿಎಫ್ಐ ಹಣ ಬೇಕಿಲ್ಲ: ಸಂಸದೆ ಶೋಭಾ ಕರಂದ್ಲಾಜೆ ಕಿಡಿ