ಕೋಲಾರ: ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಕ್ಲರ್ಕ್ಗೆ ಪೋಷಕರು ಚಳಿ ಬಿಡಿಸಿರುವ ಘಟನೆ ಜಿಲ್ಲೆ ಶ್ರೀನಿವಾಸಪುರದ ಎಪಿಎಂಸಿಯಲ್ಲಿ ನಡೆದಿದೆ.
ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಗುಮಾಸ್ತ ಜಗನ್ನಾಥ್ಗೆ ಮಹಿಳೆಯ ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಜೊತೆ ಈತ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಎಪಿಎಂಸಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸಮ್ಮುಖದಲ್ಲಿ ವಿಚಾರಣೆಗೆ ಕರೆಯಲಾಯಿತ್ತು. ವಿಚಾರಣೆ ಸಂದರ್ಭದಲ್ಲಿ ಮಹಿಳೆಯ ಪೋಷಕರು ಕ್ಲರ್ಕ್ಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.
ಈ ಹಿಂದೆ ಇದೇ ರೀತಿ ಬಂಗಾರಪೇಟೆ ಎಪಿಎಂಸಿಯಲ್ಲಿ ವರ್ತನೆ ನಡೆಸಿ ಒದೆ ತಿಂದಿದ್ದ ಈತನನ್ನ ಶ್ರೀನಿವಾಸಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಶ್ರೀನಿವಾಸಪುರ ಎಪಿಎಂಸಿಯಲ್ಲಿಯೂ ಅದೇ ಚಾಳಿ ಮುಂದುವರೆಸಿದ್ದ ಕ್ಲರ್ಕ್ ಜಗನ್ನಾಥ, ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಬಿಸಿ ಬಿಸಿ ಕಜ್ಜಾಯ ತಿಂದಿದ್ದಾನೆ. ಸದ್ಯ ಕ್ಲರ್ಕ್ ಗೂಸಾ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.