ಕೋಲಾರ : ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿಯಲ್ಲಿ ಸ್ಥಾನಮಾನ ಕೊಡಲು ಸಾಧ್ಯವೇ ಇಲ್ಲ ಎಂದು ಕೋಲಾರದಲ್ಲಿ ಬಂಗಾರಪೇಟೆ ಕೈ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹೇಳಿದರು.
ಇಂದು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಗೆದ್ದಿರೋರಿಗೆ ಸ್ಥಾನಮಾನ ಕೊಡೋದೆ ಕಷ್ಟ. ಹಳಬರು-ಹೊಸಬರನ್ನು ಒಟ್ಟಾಗಿ ಕರೆದುಕೊಂಡು ಹೋಗೋದೆ ಸಿಎಂಗೆ ಸರ್ಕಸ್ ಆಗುತ್ತೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಎಂದರು. ಬಿಜೆಪಿ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪಗೆ ರಾಜ್ಯದ ಅಭಿವೃದ್ದಿಗಿಂತ ತಮ್ಮ ಪಕ್ಷದ ಶಾಸಕರನ್ನು ಸಮಾಧಾನ ಪಡಿಸುವುದೇ ದೊಡ್ಡ ಕೆಲಸವಾಗುತ್ತೆ ಎಂದು ಹೇಳಿದರು.
ನೂತನ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಬಂದ್ರೆ ಸ್ವಾಗತಿಸುತ್ತೇವೆ ಎಂದರು. ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿರೋ ಶರತ್ ಏಕೆ ಕಾಂಗ್ರೆಸ್ಗೆ ಬರಬಾರದು. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಹೈಕಮಾಂಡ್ಗೆ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು.