ಕೋಲಾರ: ಕೋಲಾರ ಕ್ಷೇತ್ರದ ಶಾಸಕ ಕೆ. ಶ್ರೀನಿವಾಸಗೌಡರ ಮಗನ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀನಿವಾಸಗೌಡ ಅವರ ಮಗ ಮಂಜುನಾಥ್, ಎಚ್ ಕ್ರಾಸ್ನಿಂದ ಚಿಂತಾಮಣಿಗೆ ಹೋಗುವ ವೇಳೆ ಕೋಲಾರ ತಾಲೂಕಿನ ಬೀಚಗೊಂಡನಹಳ್ಳಿ ಬಳಿಯ ಟೋಲ್ ಸಮೀಪ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ.
ದ್ವಿಚಕ್ರ ವಾಹನ ಕಾರಿಗೆ ಎದುರು ಬಂದಿದ್ದು, ಅದಕ್ಕೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ.
ವಿಷಯ ತಿಳಿದು ಖದ್ದು ಶಾಸಕರೇ ಸ್ಥಳಕ್ಕೆ ಭೇಟಿ ನೀಡಿ ಮಗನನ್ನ ಮನೆಗೆ ಕರೆದುಕೊಂಡು ಹೋಗಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದೆ.
ಇದನ್ನೂ ಓದಿ:ಶೋ ರೂಂ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ: ಬೆಂಗಳೂರಲ್ಲಿ ಆರೋಪಿ ಅರೆಸ್ಟ್