ಕೋಲಾರ: ವಿಧಾನಪರಿಷತ್ ಸದಸ್ಯ ರವಿಕುಮಾರ್ ಪ್ರಯಾಣಿಸುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಕೋಲಾರದ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ.
ಕೋಲಾರಕ್ಕೆ ಆಗಮಿಸುತ್ತಿದ್ದ ಎಂಎಲ್ಸಿ ರವಿಕುಮಾರ್ ಅವರಿದ್ದ ಕಾರು ಹಿಂಬದಿಯಿಂದ ಬೈಕ್ಗೆ ಗುದ್ದಿದ್ದು ಸವಾರ ಗಾಯಗೊಂಡಿದ್ದಾನೆ. ಗಾಯಾಳು ಸವಾರನನ್ನು ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವಾದರೂ ಕಾರಿನಿಂದ ಕೆಳಗಿಳಿಯದೆ ದರ್ಪ ತೋರಿದರೆನ್ನಲಾದ ಎಂಎಲ್ಸಿ ರವಿಕುಮಾರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ: ಖಾಕಿ ದರ್ಪಕ್ಕೆ ಕಾಲು ಕಳೆದುಕೊಂಡ ತರಕಾರಿ ಮಾರುವ ಯುವಕ