ETV Bharat / state

ರಾಜಕೀಯ ಪ್ರತಿಷ್ಠೆ: ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನವೇ ನಾಯಕರು ವಾಪಸ್‌ - ಆಯುಷ್ಮಾನ್ ಭಾರತ ಯೋಜನೆಗೆ ಚಾಲನೆ

ಕೋಲಾರ ನಗರದ ಎಸ್.ಎನ್.ಆರ್. ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಆಯುಷ್ಮಾನ್ ಭಾರತ ಯೋಜನೆಗೆ ಚಾಲನೆ ಹಾಗೂ ವಿವಿಧ ಆರೋಗ್ಯ ಕೇಂದ್ರಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Mother and Children's Hospital Opening Program in kolar
ಉದ್ಘಾಟನೆ ಕಾರ್ಯಕ್ರಮಕ್ಕೆ ಬಾರದೇ ವಾಪಸ್ ಹೋದ ನಾಯಕರು
author img

By

Published : Feb 15, 2020, 6:46 PM IST

ಕೋಲಾರ : ನಗರದ ಎಸ್.ಎನ್.ಆರ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಆಯುಷ್ಮಾನ್ ಭಾರತ ಯೋಜನೆಗೆ ಚಾಲನೆ ಹಾಗೂ ವಿವಿಧ ಆರೋಗ್ಯ ಕೇಂದ್ರಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಉದ್ಘಾಟನೆ ಕಾರ್ಯಕ್ರಮಕ್ಕೆ ಬಾರದೇ ವಾಪಸ್ ಹೋದ ನಾಯಕರು

12 ಗಂಟೆಗೆ ನಿಗದಿಯಾಗಿದ್ದ ಉದ್ಘಾಟನೆ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಜೆಡಿಎಸ್ ಹಿರಿಯ ಶಾಸಕ ಶ್ರೀನಿವಾಸಗೌಡ ಇಬ್ಬರೂ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ವಾಪಸ್​ ಆದರು. ಆಸ್ಪತ್ರೆಗೆ ಭೇಟಿ ನೀಡಿದ ರಮೇಶ್ ಕುಮಾರ್, ವೈದ್ಯಾಧಿಕಾರಿಗಳೊಂದಿಗೆ ಕೆಲಕಾಲ ಚರ್ಚಿಸಿ ವೇದಿಕೆಗೆ ಬಾರದೆ ಬಾತ್ ರೂಂಗೆ ಹೋಗಿ ಬರುವುದಾಗಿ ಹೊರಟೆ ಬಿಟ್ರು. ಇನ್ನೂ ಸಮಯಕ್ಕೆ ಸರಿಯಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಕೂಡ ವೇದಿಕೆಗೆ ಬಾರದೆ ವಾಪಸ್ಸಾದರು.

ಜಿಲ್ಲೆಯ ಇಬ್ಬರು ಹಿರಿಯ ನಾಯಕರು, ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದೆ ರಾಜಕೀಯ ಪ್ರತಿಷ್ಠೆ ತೋರಿಸಿದ್ದು ಚರ್ಚೆಗೆ ಗ್ರಾಸವಾಗಿದೆ. 3 ನೇ ಬಾರಿ ಉದ್ಘಾಟನೆ ಕಾರ್ಯಕ್ರಮ ಮುಂದೂಡಿ, ಕೊನೆಗೆ 4 ನೇ ದಿನ ರಾಜಕೀಯ ಪ್ರತಿಷ್ಠೆಯ ನಡುವೆ ಉದ್ಘಾಟನೆಯಾಗಿದ್ದು ವಿಶೇಷ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.